ವಿಜಯಪುರ : ಹೆಚ್.ಡಿ ಕುಮಾರಸ್ವಾಮಿ ಸರ್ಕಾರ ಬಿಡುಗಡೆ ಮಾಡಿದ್ದ ಅನುದಾನವನ್ನು ಯಡಿಯೂರಪ್ಪ ಸರ್ಕಾರ ಕಿತ್ತುಕೊಂಡಿದೆ ಎಂದು ಅವರ ಪಕ್ಷದ ಶಾಸಕರೇ ಬಹಿರಂಗವಾಗಿ ಆರೋಪಿಸಿದ್ದಾರೆ. ಸರ್ಕಾರ ದಿವಾಳಿ ಆಗಿರುವುದಕ್ಕೆ ಈ ಹೇಳಿಕೆಯೇ ನಿದರ್ಶನ ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಟೀಕಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರ ದಿವಾಳಿ ಆಗಿದೆ. ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ನೀಡಲು ಹಣವೇ ಇಲ್ಲ. ಕನಿಷ್ಠ ನಗರದಲ್ಲಿ ಗುಂಡಿ ಬಿದ್ದ ರಸ್ತೆಗಳಿಗೆ ಮಣ್ಣು ಹಾಕಲು ಸರ್ಕಾರದ ಬಳಿ ಹಣವಿಲ್ಲ ಎಂದು ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ವಿಜಯೇಂದ್ರ ಸೂಪರ್ ಸಿಎಂ ಎಂಬ ಆರೋಪದ ಬಗ್ಗೆ ಮಾತನಾಡಿದ ಅವರು, ನಾನು ವೈಯುಕ್ತಿಕ ಟೀಕೆ ಮಾಡುವುದಿಲ್ಲ. ವಿಜಯೇಂದ್ರ ಕುರಿತು ಮಾಧ್ಯಮಗಳಲ್ಲಿ ನೋಡಿದ್ದೇನೆ. ಮಾಧ್ಯಮಗಳ ಹೇಳಿಕೆ ಆಧರಿಸಿ ನಾನು ಆರೋಪ ಮಾಡೋದಿಲ್ಲ ಎಂದರು..









