ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಾಸ್ಕ್ ಧರಿಸಲೇ ಬೇಕೇಂಬ ನಿಯಮದಲ್ಲಿ ಬದಲಾವಣೆಯಾಗಿದೆ ಎಂಬ ವಿಚಾರ ನಿನ್ನೆಯಿಂದ ಸಾಕಷ್ಟು ಸದ್ದು ಮಾಡುತ್ತಿದೆ. ಬೈಕ್ ಆಗಲಿ ಕಾರ್ ಆಗಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ ಮಾಸ್ಕ್ ಹಾಕಿಕೊಳ್ಳಲೇ ಬೇಕೆಂದಿಲ್ಲ ಎಂಬ ಸುದ್ದಿ ಹರಿದಾಡುತಿತ್ತು. ಆದರೆ ಈ ವದಂತಿಗಳಿಗೆ ತೆರೆ ಎಳೆದಿರುವ ಬಿಬಿಎಂಪಿ ಈ ಸುದ್ದಿ ಸುಳ್ಳು. ಮಾಸ್ಕ್ ಧರಿಸುವ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಿನಾಯಿತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ.
![]()
ಈ ಕುರಿತಂತೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ನಗರದಲ್ಲಿ ವಾಯು ವಿಹಾರ ಮಾಡುವಾಗ, ಕಾರು, ಬೈಕ್ ಚಾಲನೆ ಮಾಡುವಾಗ ಮಾಸ್ಕ್ ಧರಿಸುವಂತಿಲ್ಲ ಎಂಬ ಸುದ್ದಿ ಸುಳ್ಳು. ಈ ರೀತಿಯ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ಮನೆಯಿಂದ ಹೊರಬರುವ ಪ್ರತಿಯೊಬ್ಬರು ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕು. ತಪ್ಪಿದರೇ ದಂಡ ವಿಧಿಸಲಾಗುತ್ತದೆ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.









