ಬೆಂಗಳೂರು : ನೆರೆ ಪರಿಹಾರ ಹಾಗೂ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಆರೋಪಿಸಿದ್ದಾರೆ. ಇಂದು ದೇವೇಗೌಡರು ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಹಾಗೂ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ವಿಡಿಯೋ ಸಂವಾದದಲ್ಲಿ ದೇವೇಗೌಡರು, ರಾಜ್ಯದ ನೆರೆ ಹಾವಳಿಯಿಂದ ತತ್ತರಿಸಿದ ಪ್ರದೇಶಗಳ ಕುರಿತು ಮಾಹಿತಿಯನ್ನು ಕಲೆಹಾಕಿದ್ದಾರೆ. ಈ ವೇಳೆ ಮಾತನಾಡಿದ ಅವರು ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿದ್ದು ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ ಕುಮಾರಸ್ವಾಮಿಯವರು ಉಪಸ್ಥಿತರಿದ್ದರು.