ಬೆಂಗಳೂರು: ಡಿಜೆಹಳ್ಳಿ ಮತ್ತು ಕೆಜಿಹಳ್ಳಿ ಗಲಭೆ ವೇಳೆ ಸಾರ್ವಜನಿಕರ ಆಸ್ತಿಪಾಸ್ತಿ ಹಾಗೂ ವಾಹನಗಳನ್ನು ಹಾನಿ ಮಾಡಿದವರಿಂದಲೇ ನಷ್ಟ ಭರಿಸುವ ಬಗ್ಗೆ ಈಗಾಗಲೇ ತೀರ್ಪು ಹೊರಬಿದ್ದಿದೆ. ಈ ಸಂಬಂಧ ನಿವೃತ್ತ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ ಆಗಿ ಹೈಕೋರ್ಟ್ ನೇಮಕ ಮಾಡಿದೆ.
ವಾದ-ವಿವಾದವನ್ನು ಆಲಿಸಿ ತೀರ್ಪನ್ನು ಕಾಯ್ದಿರಿಸಿದ್ದ ಹೈಕೋರ್ಟ್ ಮುಖ್ಯಮಂತ್ರಿ ಅಭಯ್ ಶ್ರೀನಿವಾಸ್ ಒಕಾ ಹಾಗೂ ಅಶೋಕ್.ಎಸ್ ಕಿಣಗಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಕೆಂಪಣ್ಣ ಅವರನ್ನು ಕ್ಲೇಮ್ ಕಮೀಷನರ್ನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತು.
ಇನ್ನೂ ಕ್ಲೇಮ್ ಕಮೀಷನರ್ಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳು, ಸಿಬ್ಬಂದಿ, ವಾಹನ ಸೇರಿದಂತೆ ಎಲ್ಲಾ ರೀತಿಯ ಸಹಕಾರ ಕೊಡಬೇಕೆಂದು ನ್ಯಾಯಾಲಯ ಸರ್ಕಾರಕ್ಕೆ ಸೂಚನೆ ಕೊಟ್ಟಿದೆ. ಡಿಜೆಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದ ಗಲಭೆ ವೇಳೆ ಸಾರ್ವಜನಿಕರಿಗೆ ಸೇರಿದ ವಾಹನಗಳಿಗೆ ಅಪಾರ ಪ್ರಮಾಣದ ಹಾನಿ ಉಂಟಾಗಿತ್ತು. ಕಾರು, ದ್ವಿಚಕ್ರವಾಹನ, ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದಲ್ಲದೇ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನೂ ಹಾನಿಗೀಡುಮಾಡಲಾಗಿತ್ತು.