ಬೆಂಗಳೂರು : ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಮಾಜಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಮೂವರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದ ಸಿಬಿಐ ತನಿಖಾ ತಂಡದ ವರದಿಯನ್ನು ಜನಪ್ರತಿನಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ಮರುತನಿಖೆಗೆ ಆದೇಶಿಸಿದೆ.
ಈ ಕುರಿತಂತೆ ಇಂದು ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯ, ಸಿಬಿಐ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಲ್ಲಿಸಿದಲಾಗಿದ್ದಂತ ಬಿ ರಿಪೋರ್ಟ್ ವರದಿಯನ್ನು ತಿರಸ್ಕರಿಸಿತು. ಹೀಗಾಗಿ ಮಾಜಿ ಸಚಿವ, ಶಾಸಕ ಕೆ.ಜೆ.ಜಾರ್ಜ್, ಹಿರಿಯ ಐಪಿಎಸ್ ಅಧಿಕಾರಿಗಳಾದ ಪ್ರಣಬ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಅವರುಗಳಿಗೆ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ಜಾರಿ ಮಾಡಲಾಗಿದೆ.
![]()
ಗಣಪತಿ ಆತ್ಮಹತ್ಯೆಗೆ ಯಾರೊಬ್ಬರೂ ಪ್ರಚೋದನೆ ನೀಡಿಲ್ಲ ಎಂದು ಸಿಬಿಐ ಪ್ರಕರಣದ ಮೂವರು ಆರೋಪಿಗಳಿಗೆ ಕ್ಲೀನ್ ಚೀಟ್ ನೀಡಿತ್ತು. ಇದೀಗ ವರದಿಯನ್ನು ತಿರಸ್ಕರಿಸಿರುವುದರಿಂದ ಮತ್ತೆ ತನಿಖೆ ಆರಂಭವಾಗಲಿದೆ. ಸಿಬಿಐ ತನಿಖಾ ತಂಡ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೇಹಲ್ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದರು.









