ADVERTISEMENT
Saturday, August 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಕ್ಕೆ ಸಿಗದ ಜಿಎಸ್‍ಟಿ ಪಾಲು; ಮೋದಿ ವಿರುದ್ಧ ಟಗರು ಗುಟುರು..!

admin by admin
August 28, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಲಾಕ್‍ಡೌನ್ ಹಾಗೂ ಕೊರೊನಾ ಸಂಕಷ್ಟದಿಂದಾಗಿ ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದ್ದರೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಜಿಎಸ್‍ಟಿ ಪಾಲು ನೀಡಲು ನಿರಾಕರಿಸಿರುವುದಕ್ಕೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ಟ್ವಿಟರ್‍ನಲ್ಲಿ ಸರಣಿ ಟೀಕಾ ಪ್ರಹಾರ ನಡೆಸಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ರಾಜ್ಯದ ಜನತೆಗೆ ಭರವಸೆ ನೀಡಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದ್ದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತ ಶತ್ರುಗಳಾಗಿ ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.


ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹ ಸಚಿವರು ರಾಜ್ಯದಲ್ಲಿ ಜಿಎಸ್ ಟಿ ಸಂಗ್ರಹ ಶೇಕಡಾ 71ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು ಕಡಿತಗೊಳ್ಳುತ್ತಲೇ ಬಂದಿದೆ.
14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ.
ಮತ್ತೊಂದು ಟ್ವಿಟರ್‍ನಲ್ಲಿ ನಾಲ್ಕು ತಿಂಗಳ ಒಟ್ಟು ಜಿಎಸ್‍ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ. ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‍ಬಿಐನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಎಂದು ಪ್ರಶ್ನಿಸಿದ್ದಾರೆ.

Related posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

August 8, 2026
malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

August 8, 2026


ಸಂವಿಧಾನದ 101ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‍ಟಿ ಕಾಯ್ದೆಯ ಸೆಕ್ಷನ್ 18ರ ಪ್ರಕಾರ ಜಿಎಸ್‍ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ.
ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ. ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್ ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.


ಜಿಎಸ್ ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಸರಣಿ ಟ್ವೀಟ್ ಮಾಡಿ ಟೀಕಿಸಿದ್ದಾರೆ.

Tags: BJPGSTModiSiddaramaiah angry
ShareTweetSendShare
Join us on:

Related Posts

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

film- ‘ನ್ಯಾಚುರಲ್ ಸ್ಟಾರ್’ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ!

by admin
August 8, 2026
0

'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ 'ದಿ ಪ್ಯಾರಡೈಸ್' ಸ್ಫೋಟಕ ಟೀಸರ್ ರಿಲೀಸ್: ಸೆಪ್ಟೆಂಬರ್ 24ಕ್ಕೆ ವಿಶ್ವಾದ್ಯಂತ ಬಿಡುಗಡೆ! ಹೈದರಾಬಾದ್: 'ನ್ಯಾಚುರಲ್ ಸ್ಟಾರ್' ನಾನಿ ಅಭಿನಯದ ಬಹುನಿರೀಕ್ಷಿತ ಪ್ಯಾನ್-ವರ್ಲ್ಡ್...

malayalam-movie-half-tiff-selection-excel-entertainment-deal-kannada

Film – ಕೆನಡಾದ ‘ಟೊರೊಂಟೊ ಫಿಲ್ಮ್ ಫೆಸ್ಟಿವಲ್’ಗೆ ಮಲಯಾಳಂನ ‘ಹಾಫ್’ ಸಿನಿಮಾ ಆಯ್ಕೆ: ‘ಎಕ್ಸೆಲ್ ಎಂಟರ್‌ಟೈನ್‌ಮೆಂಟ್’ ಜೊತೆ ಬೃಹತ್ ಒಪ್ಪಂದ!

by admin
August 8, 2026
0

ಮುಂಬೈ: ಮಲಯಾಳಂ ಚಿತ್ರರಂಗದ ಬಿಗ್ ಬಜೆಟ್ ವ್ಯಾಂಪೈರ್ ಆಕ್ಷನ್ ಥ್ರಿಲ್ಲರ್ ‘ಹಾಫ್’ (HALF) ಸಿನಿಮಾವು ಜಾಗತಿಕ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತಿದೆ. 'ಫ್ರಾಗ್ರೆಂಟ್ ನೇಚರ್ ಫಿಲ್ಮ್ ಕ್ರಿಯೇಷನ್ಸ್'...

jio-new-long-term-ott-pass-plans-kannada

ಜಿಯೋ ಒಟಿಟಿ-ಪಾಸ್ ವ್ಯಾಪ್ತಿ ವಿಸ್ತರಣೆ: 3 ತಿಂಗಳಿಗೆ 550 ರೂ., ವರ್ಷಪೂರ್ತಿ ಮನರಂಜನೆಗೆ 2000 ರೂ.

by admin
August 8, 2026
0

- 15 ಪ್ರೀಮಿಯಂ ಒಟಿಟಿ ಅಪ್ಲಿಕೇಶನ್ ಮತ್ತು 1,000 ಕ್ಕೂ ಹೆಚ್ಚು ಲೈವ್ ಟಿವಿ ಚಾನೆಲ್‌ಗಳು - ಹೈ-ಸ್ಪೀಡ್ ಡೇಟಾ ಮತ್ತು ಅನ್‌ಲಿಮಿಟೆಡ್ 5G - ವರ್ಷಪೂರ್ತಿ...

dr-vidyabhushana-bhaja-mana-workshop-kannada

Bengaluru – ಡಾ. ವಿದ್ಯಾಭೂಷಣ್ ನೇತೃತ್ವದ ‘ಭಜ ಮನ’ ಕಾರ್ಯಾಗಾರಕ್ಕೆ ಅಭೂತಪೂರ್ವ ಸ್ಪಂದನೆ!

by admin
August 8, 2026
0

• ಜಯನಗರದಲ್ಲಿ ಯಶಸ್ವಿಯಾಗಿ ಜರುಗಿದ 'ಭಜ ಮನ' ಗಾಯನ ಕಾರ್ಯಾಗಾರ • ವಿದ್ಯಾಭೂಷಣ್ - ಮೇಧಾ ಅವರಿಂದ ಹೊಸ ತಲೆಮಾರಿಗೆ ದಾಸ ಸಾಹಿತ್ಯದ ಮಾರ್ಗದರ್ಶನ • ಸಂಗೀತಾಸಕ್ತರಿಗೆ...

nagara-panchami-2026-history-significance-kannada

Astro- ನಾಗರ ಪಂಚಮಿ: ಪ್ರಾಚೀನ ನಾಗಾರಾಧನೆ, ಮಹತ್ವ ಮತ್ತು ವಿಶೇಷ ಆಚರಣೆಗಳು

by admin
August 8, 2026
0

ಭಾರತೀಯ ಸನಾತನ ಸಂಸ್ಕೃತಿಯು ಪ್ರಕೃತಿಯನ್ನು ದೈವಸ್ವರೂಪವೆಂದು ಭಾವಿಸಿ ಆರಾಧಿಸುವ ವಿಶಿಷ್ಟ ಹಾಗೂ ಅನಾದಿ ಪರಂಪರೆಯನ್ನು ಹೊಂದಿದೆ. ಪ್ರಕೃತಿ ಆರಾಧನೆಯಲ್ಲಿ 'ನಾಗಾರಾಧನೆ'ಯು ಅತ್ಯಂತ ಪ್ರಾಚೀನ ಹಾಗೂ ಪ್ರಮುಖ ಸ್ಥಾನವನ್ನು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram