ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ನಶೆ ಬಗ್ಗೆ ಮಾಹಿತಿ ನೀಡಲು ನಿರ್ದೇಶಕ ಇಂದ್ರಜಿತ್ ಲಂಕೇಶ್ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದು, ವಿಚಾರಣೆ ತೀವ್ರಗೊಂಡಿದೆ.
ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಲ್ಯಾಪ್‍ಟಾಪ್, 1 ಫೈಲ್ ಹೊಂದಿರುವ ದಾಖಲೆಗಳೊಂದಿಗೆ ಇಂದ್ರಜಿತ್ ಲಂಕೇಶ್ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಎಸಿಪಿ ಗೌತಮ್, ಇನ್ಸ್‍ಪೆಕ್ಟರ್ ಉಮೇಶ್ ಬೋಳೆತ್ತಿ ನೇತೃತ್ವದಲ್ಲಿ ಇಂದ್ರಜಿತ್ ಲಂಕೇಶ್ ವಿಚಾರಣೆ ನಡೆಯುತ್ತಿದೆ.
ಇಂದ್ರಜಿತ್ ಲಂಕೇಶ್ ನೀಡುವ ಪ್ರತಿಯೊಂದು ಹೇಳಿಕೆ ಹಾಗೂ ದಾಖಲೆಗಳನ್ನು ಸಿಸಿಬಿ ಅಧಿಕಾರಿಗಳಿಂದ ವಿಡಿಯೋ ಹಾಗೂ ಆಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗುತ್ತಿದೆ.
ಇಂದ್ರಜಿತ್ ಲಂಕೇಶ್ ಯಾರ ಬಗ್ಗೆ ಮಾಹಿತಿ ಕೊಡ್ತಾರೊ, ಆ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ ಇಲ್ಲವೋ..ಒಂದು ವೇಳೆ ಹೇಳಿದರೆ ಮುಂದೆ ಏನ್ಮಾಡಬೇಕು, ಮುಂದೆ ಚಿತ್ರರಂಗದಲ್ಲಿ ನಮ್ಮ ಭವಿಷ್ಯ ಏನಾಗುತ್ತೋ ಎಂಬ ಟೆನ್ಶನ್ ಕೆಲ ನಟಿ-ನಟಿಯರಿಗೆ ಶುರುವಾಗಿದೆ ಎನ್ನಲಾಗಿದೆ.
ಸಿಸಿಬಿ ಕಚೇರಿಗೆ ಹೋಗುವ ಮುನ್ನ ಮಾತನಾಡಿದ ಇಂದ್ರಜಿತ್ ಲಂಕೇಶ್, ಸಿಸಿಬಿ ವಿಚಾರಣೆಗೆ ಹಾಜರಾಗುತ್ತಿದ್ದೇನೆ, ವಿಚಾರಣೆ ಮುಗಿಸಿದ ನಂತರ ಮಾತನಾಡುತ್ತೇನೆ. ನನಗೆ ಯಾರಿಂದಲೂ ಜೀವ ಬೆದರಿಕೆ ಅಥವಾ ಬೆದರಿಕೆ ಕರೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
*********
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








