ಕಲಬುರಗಿ: ಡ್ರಗ್ ದಂಧೆಯಲ್ಲಿ ಸಿನಿಮಾ-ರಾಜಕಾರಣಿಗಳ ನಂಟಿನ ವಿಚಾರವಾಗಿ ಸರ್ಕಾರ ಈಗಾಗಲೇ ಎಲ್ಲಾ ಹಂತದಲ್ಲಿ ತನಿಖೆ ಮಾಡುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಯಾಂಡಲ್‍ವುಡ್ ಡ್ರಗ್ಸ್ ಲಿಂಕ್ ಬಗ್ಗೆ ಇಂದ್ರಜಿತ್ ಲಂಕೇಶ್ ಹೇಳಿಕೆಯನ್ನು ಸಹ ಪರಿಗಣಿಸಲಾಗಿದೆ. ತಪ್ಪಿತಸ್ಥರು ಯಾರೇ ಇದ್ರೂ ಸರ್ಕಾರ ಕಠಿಣ ಕ್ರಮ ತಗೊಳ್ಳುತ್ತೆ ಎಂದರು.
ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟವಾದ ಕ್ರಮಕೈಗೊಂಡಿದೆ. ಯಾವ ಯಾವ ರೀತಿಯ ತನಿಖೆ ನಡೆಯಬೇಕು. ಈ ಜಾಲದ ಬಗ್ಗೆ ಯಾರು ಮಾಹಿತಿ ಕೊಡುತ್ತಾರೋ ಅವರಿಂದ ಮಾಹಿತಿ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದೆ. ಇದಕ್ಕೆ ಎಲ್ಲರೂ ಸಹಕಾರ ಕೊಟ್ಟರೆ ಈ ಜಾಲಕ್ಕೆ ಕಡಿವಾಣ ಹಾಕಲು ಸಾಧ್ಯವಾಗಲಿದೆ ಎಂದು ತಿಳಿಸಿದರು.
ಡ್ರಗ್ಸ್ ಮಾಫಿಯಾ ವಿಚಾರವಾಗಿ ಬರೀ ಟೀಕೆ ಮಾಡೋದೇ ಸಿದ್ದರಾಮಯ್ಯನವರ ಕೆಲಸವಾಗಿದೆ. ಕೊರೊನಾ ಸಮಯದಲ್ಲಿ ಎಲ್ಲಾ ಕಡೆಯೂ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಕೊರೊನಾ ನಿಯಂತ್ರಣ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕೇಂದ್ರದ ಮೋದಿ ಸರ್ಕಾರ ಹಾಗೂ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಪ್ರತಿಪಕ್ಷ ಹಾಗೂ ಸಿದ್ದರಾಮಯ್ಯ ಅವರಿಗೆ ಮಾತನಾಡಲು ಯಾವುದೇ ವಿಷಯ ಇಲ್ಲ. ಹೀಗಾಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಅನಗತ್ಯ ಟೀಕೆ ಮಾಡುತ್ತಿದ್ದಾರೆ ಎಂದು ಸಚಿವ ಶೆಟ್ಟರ್ ತಿರುಗೇಟು ನೀಡಿದ್ದಾರೆ.
****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








