ಬೆಂಗಳೂರು: ಸ್ಯಾಂಡಲ್‍ವುಡ್‍ನ ಡ್ರಗ್ಸ್ ಜಾಲದ ಬಗ್ಗೆ 10-15 ನಟ-ನಟಿಯರ ಹೆಸರನ್ನು ಸಿಸಿಬಿ ಅಧಿಕಾರಿಗಳಿಗೆ ನೀಡಿದ್ದೇನೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂಬ ಕಾರಣಕ್ಕೆ ಈ ಮಾಹಿತಿ ನೀಡಿದ್ದೇನೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸತತ 5 ಗಂಟೆಗಳ ಕಾಲ ಸಿಸಿಬಿ ಪೊಲೀಸರ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್
ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಸಿಸಿಬಿ ಪೊಲೀಸರ ವಿಚಾರಣೆಗೆ ಸಹಕಾರ ನೀಡಿದ್ದೇನೆ. ನನಗೆ ಗೊತ್ತಿರುವ ಮಾಹಿತಿಯನ್ನು ಪೊಲೀಸರಿಗೆ ನೀಡಿದ್ದೇನೆ. ನನ್ನ ಬಳಿ ಇರುವ ಹಾಗೂ ಬೇರೆ ಬೇರೆ ಕಡೆ ಸಿಕ್ಕಿರುವ ಮಾಹಿತಿ ಕೊಟ್ಟಿದ್ದೇನೆ ಎಂದರು.
ಯಾರ ಬಗ್ಗೆ ಮಾಹಿತಿ ಕೊಟ್ಟಿದ್ದೇನೆ ಎಂದು ಎಲ್ಲಾ ವಿಚಾರವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ನಾನು ಗಾಳಿಯಲ್ಲಿ ಗುಂಡು ಹಾರಿಸುವ ವ್ಯಕ್ತಿಯೂ ಅಲ್ಲ. ಸಮಾಜದ ಹಿತದೃಷ್ಟಿಯಿಂದ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದೇನೆ. ನನ್ನ ವಿರುದ್ಧ ಕೆಲವರು ವಾಗ್ದಾಳಿ ನಡೆಸಿದ್ದಾರೆ. ಅಂತವರ ಹೇಳಿಕೆಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಭದ್ರತೆ ಕೇಳಿಲ್ಲ, ಬೆಂಬಲ ನೀಡುವಂತೆ ಕೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನಾನು ಕೊಟ್ಟ ಮಾಹಿತಿಯಿಂದ ಸಿಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ಯಾರೆಂದು ಹೇಳಿದರೆ ತನಿಖೆಗೆ ಅಡ್ಡಿಯಾಗುತ್ತದೆ.
ನನ್ನ ಬಳಿ ಇರುವ ವಿಡಿಯೋ ಸಾಕ್ಷಿಗಳನ್ನು ನೀಡಿದ್ದೇನೆ. ಸ್ಟಾರ್ಸ್‍ಗಳ ಹೆಸರು ಕೇಳಿ ಸಿಸಿಬಿ ಅಧಿಕಾರಿಗಳು ಶಾಕ್ ಆಗಿದ್ದಾರೆ. ನಾನು ಹೆಸರು ಹೇಳಲು ಆಗಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಇಂದ್ರಜಿತ್ ಲಂಕೇಶ್ ತಿಳಿಸಿದರು.
******
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








