ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಸ್ವಿಫ್ಟ್ ಕಾರು ಮತ್ತು ಕೆಎಸ್.ಅರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕಾರು ಚಾಲಕ ಮೃತಪಟ್ಟ ಘಟನೆ ಮಾ.8ರಂದು ರಾತ್ರಿ ನಡೆದಿದೆ.
ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು, ಇಲ್ಲಿನ ಸಿಟಿ ಲ್ಯಾಂಡ್ ಎದುರಿನ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದು ಕಡಬಕ್ಕೆ ಹೋಗುತ್ತಿದ್ದ ಕೆಎಸ್.ಅರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ದಯೇಶ್ (26ವ) ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.
ಪುತ್ತೂರಿನ ಮೂಕಾಂಬಿಕಾ ಗ್ಯಾಸ್ ವಿತರಣಾ ಸಂಸ್ಥೆಯಲ್ಲಿ ಚಾಲಕರಾಗಿದ್ದ ದಯೇಶ್ ಸೋಮವಾರ ಕರ್ತವ್ಯ ನಿರ್ವಹಿಸಲೆಂದು ತನ್ನ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಕಾಂಗ್ರೆಸ್ ಮೈತ್ರಿ ಮುರಿದ ಡಿಎಂಕೆ: ಸಂಸತ್ತಿನಲ್ಲಿ ಪ್ರತ್ಯೇಕ ಆಸನಕ್ಕೆ ಕನ್ನಿಮೋಳಿ ಪತ್ರ
ದಕ್ಷಿಣ ಭಾರತದ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಲವಾದ ಹೊಡೆತ ಬಿದ್ದಿದೆ. ಕೇರಳದಲ್ಲಿ ಜಯಭೇರಿ ಬಾರಿಸಿ ಗೆಲುವಿನ ನಗೆ ಬೀರಿದ್ದ ಕಾಂಗ್ರೆಸ್‌ಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷವು ದೊಡ್ಡ...








