ಬೆಂಗಳೂರು: ವಿವಾದದ ಕೇಂದ್ರ ಬಿಂದುವಾಗಿದ್ದ ರಾಜಧಾನಿ ಬೆಂಗಳೂರಿನ ಯಲಹಂಕದ ವೀರ ಸಾವರ್ಕರ್ ಮೇಲ್ಸೇತುವೆ ಉದ್ಘಾಟನೆ ಹಾಗೂ ನಾಮಕರಣ ಕಾರ್ಯಕ್ರಮ ಮತ್ತೆ ಮುಂದಕ್ಕೆ ಹೋಗಿದೆ.
ಯಲಹಂಕದ ಡೈರಿ ವೃತ್ತ ಸಮೀಪದಲ್ಲಿ ಬಿಬಿಎಂಪಿ ನಿರ್ಮಿಸಿರುವ ಮೇಲ್ಸೇತುವೆಗೆ ವೀರ್ ಸಾರ್ವರ್ಕರ್ ಮೇಲ್ಸೇತುವೆ ಎಂದು ಹೆಸರಿಡಲು ಸರ್ಕಾರ ಮುಂದಾಗಿದೆ. ಈ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮ ಕಳೆದ ಎರಡು ತಿಂಗಳ ಹಿಂದೆಯೇ ನಿಗದಿಯಾಗಿಯಾಗಿತ್ತು. ಆದರೆ, ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ಕೆಲ ಸಂಘಟನೆಗಳು ಮೇಲ್ಸೇತುವೆಗೆ ವೀರ ಸಾವರ್ಕರ್ ಹೆಸರು ಇಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.

ಬಹಳ ದಿನಗಳ ನಂತರ ಇಂದು ಮೇಲ್ಸೇತುವೆ ಉದ್ಘಾಟನೆ ಹಾಗೂ ವೀರ ಸಾವರ್ಕರ್ ಮೇಲ್ಸೇತುವೆ ಎಂದು ನಾಮಕರಣ ಕಾರ್ಯಕ್ರಮವನ್ನು ಇಂದು ಬಿಬಿಎಂಪಿ ನಿಗಧಿಪಡಿಸಿತ್ತು.
ಮುಖ್ಯಮಂತ್ರಿಗಳಿಂದ ಮೇಲ್ಸೇತುವೆ ಉದ್ಘಾಟನೆಗೆ ಎಲ್ಲಾ ರೀತಿಯ ಸಿದ್ಧತೆಗಳೂ ಪೂರ್ಣಗೊಂಡಿದ್ದವು. ಆದರೆ, ಕಳೆದ ರಾತ್ರಿ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ. ರಾಷ್ಟ್ರವ್ಯಾಪಿ 7 ದಿನ ಶೋಕಾಚರಣೆ ಇರುವ ಕಾರಣ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ಬಿಬಿಎಂಪಿ ತಿಳಿಸಿದೆ.
****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








