ಕೋಲಾರ: ಯಾವುದೇ ಸೂಕ್ತ ದಾಖಲೆ ಇಲ್ಲದೆ ಅಕ್ರಮವಾಗಿ ಹಣ ಸಾಗಿಸುತ್ತಿದ್ದ 2 ಕೋಟಿ ರೂ.ಗಳನ್ನು ಕೋಲಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಶ್ರೀನಿವಾಸಪುರ ತಾಲೂಕಿನ ರೋಜೇನಹಳ್ಳಿ ಗೇಟ್ ಬಳಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಹಣ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ.
ಹಣ ತೆಗೆದುಕೊಂಡು ಹೋಗುತ್ತಿದ್ದ ಕೋಲಾರ ಮೂಲದ ಚಂದ್ರು ಹಾಗೂ ಅಮರ್ ನಾಥ್ ಎಂಬುರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಕೊರೊನಾ ಸಂಕಷ್ಟ ಕಾಲದಲ್ಲಿ ಇಷ್ಟು ಹಣ ಹೇಗೆ ಬಂತು, ಯಾರಿಗೆ ಸೇರಿದ್ದು, ಉದ್ದೇಶ ಏನು ಎಂಬ ಹತ್ತು ಹಲವು ಅನುಮಾನಗಳು ಪೊಲೀಸರಿಗೆ ಮೂಡಿದೆ. ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ರೀನಿವಾಸಪುರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.
ನಾಗೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿದ್ದೇ ದೊಡ್ಡ ತಪ್ಪು: ನಾಗೇಂದ್ರರನ್ನು ಎರಡು ಬಾರಿ ಬಲಿಪಶು ಮಾಡಲಾಗಿದೆ- ಸ್ವಪಕ್ಷದ ನಿರ್ಧಾರದ ವಿರುದ್ಧವೇ ಗುಡುಗಿದ ಕೆ ಎನ್ ರಾಜಣ್ಣ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಕಿಚ್ಚು ರಾಜ್ಯ ರಾಜಕಾರಣದಲ್ಲಿ ಇನ್ನೂ ಆರಿಲ್ಲ. ಇದರ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ಅವರು ಎರಡನೇ...








