ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಸಿಎಎ ವಿರೋಧಿಗಳ ಭಾವಚಿತ್ರವಿರುವ ಬ್ಯಾನರ್ ತೆರವುಗೊಳಿಸಿ – ಉತ್ತರ ಪ್ರದೇಶ ಸರ್ಕಾರಕ್ಕೆ ಕೋರ್ಟ್ ಆದೇಶ

admin by admin
March 10, 2020
in International, Politics
Share on FacebookShare on TwitterShare on WhatsappShare on Telegram

ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರ ಸಿಎಎ ವಿರೋಧಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಸಾರ್ವಜನಿಕ ಆಸ್ತಿ ಪಾಸ್ತಿಗೆ ಹಾನಿ ಮಾಡಿದವರ ಭಾವಚಿತ್ರ ಮತ್ತು ವಿಳಾಸವುಳ್ಳ ಬ್ಯಾನರ್ ಗಳನ್ನು ರಸ್ತೆಗಳಲ್ಲಿ ಕಟ್ಟಿ ನಷ್ಟಭರಿಸುವಂತೆ ಸೂಚನೆ ನೀಡಿತ್ತು.

ಇದೀಗ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರಕಾರಕ್ಕೆ ಸಿಎಎ ವಿರೋಧಿ ಹೋರಾಟಗಾರರ ಭಾವಚಿತ್ರವಿರುವ ಬ್ಯಾನರ್ ಗಳನ್ನು ತೆರವುಗೊಳಿಸುವಂತೆ ಸೋಮವಾರ ಆದೇಶ ನೀಡಿದೆ.
ಸಿಎಎ ವಿರೋಧಿ ಹೋರಾಟಗಾರರ ಭಾವಚಿತ್ರವಿರುವ ಬ್ಯಾನರ್ ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ವಿಚಾರಣೆಯನ್ನು ಕೈಗೆತ್ತಿಕೊಂಡ, ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥುರ್ ಮತ್ತು ನ್ಯಾಯಮೂರ್ತಿ ರಮೇಶ್ ಸಿನ್ಹಾ ಅವರಿದ್ದ ವಿಭಾಗೀಯ ಪೀಠವು ಸರ್ಕಾರದ ಕ್ರಮವನ್ನು ಜನರ ಖಾಸಗಿ ಬದುಕಿನಲ್ಲಿ ಅನಗತ್ಯ ಮಧ್ಯಪ್ರವೇಶ ಎಂದು ವ್ಯಾಖ್ಯಾನಿಸಿತು.
ಮಾರ್ಚ್ 16ರ ಒಳಗೆ ಎಲ್ಲ ಬ್ಯಾನರ್ ಗಳನ್ನು ತೆರವುಗೊಳಿಸಬೇಕು ಎಂದು ಲಖನೌ ಜಿಲ್ಲಾಡಳಿತಕ್ಕೆ ಆದೇಶ ನೀಡಿದ ಕೋರ್ಟ್ ಇಂತಹ ಬ್ಯಾನರ್ ಗಳು ಸಂವಿಧಾನ ಆಶಯವನ್ನೇ ಉಲ್ಲಂಘಿಸುತ್ತವೆ. ಎಲ್ಲಾ ನಾಗರಿಕರನ್ನು ಸಮಾನವಾಗಿ ಕಾಣಬೇಕಿದ್ದ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಬೇಕಿದ್ದ ಸರ್ಕಾರ ಹಾಗೆ ನಡೆಸಿಕೊಂಡಿಲ್ಲ ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕು‌ ಎಂದು ತೀರ್ಪಿನಲ್ಲಿ ತಿಳಿಸಿತು.
ವಿಶ್ವಸಂಸ್ಥೆಯು ಖಾಸಗಿತನವನ್ನು ಎಲ್ಲ ಮನುಷ್ಯರ ಮೂಲಭೂತ ಹಕ್ಕು ಎಂದು ಗುರುತಿಸಿದೆ. ನಮ್ಮ ಸಂವಿಧಾನವು ಈ ಬಗ್ಗೆ ನೇರವಾಗಿ ಏನನ್ನೂ ಹೇಳಿಲ್ಲವಾದರೂ, ಸಂವಿಧಾನದ 21ನೇ ವಿಧಿಯ ಆಶಯವನ್ನು ನ್ಯಾಯಾಲಯಗಳು ಖಾಸಗಿತನದ ಪರವಾಗಿ ವ್ಯಾಖ್ಯಾನಿಸಿವೆ. ಸಂವಿಧಾನದ ಪ್ರಸ್ತಾವನೆಯಲ್ಲಿರುವ ಯಾವುದೇ ಮೌಲ್ಯದ ಬಗ್ಗೆ ಅಗೌರವ ತೋರುವುದನ್ನು ಸಹಿಸಲಾಗುವುದಿಲ್ಲ ಎಂದು ಹೈಕೋರ್ಟ್ ಎಚ್ಚರಿಕೆ ನೀಡಿತು.
ಪ್ರತಿಭಟನಕಾರರ ಭಾವಚಿತ್ರ ಹಾಗೂ ವಿವರಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದು ಅತಿರೇಕದ ಪರಮಾವಧಿ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತಂದ ಕ್ರಮ ಎಂದು ಅಭಿಪ್ರಾಯ ಪಟ್ಟಿತು.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

March 3, 2026
Tags: CAAUTTAR PRADESHyogi adityanath
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

ದಾರಿ ತಪ್ಪಿ ಅಧಿಕಾರಕ್ಕೆ ಬಂದಿದ್ದೆವು, ಈಗ ರಾಜ್ಯದಲ್ಲಿ ವಿರೋಧ ಪಕ್ಷವೇ ಸತ್ತು ಹೋಗಿದೆ: ಕೆ ಎಸ್ ಈಶ್ವರಪ್ಪ

by Shwetha
March 2, 2026
0

ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಮಾಜಿ ಸಚಿವ ಹಾಗೂ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ನೀಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ವಿರೋಧ ಪಕ್ಷವೇ ಇಲ್ಲದಂತಾಗಿದೆ, ಅದು...

ಶಾಸಕರ ಡಿನ್ನರ್ ಮೀಟಿಂಗ್: ಡಿ.ಕೆ. ಸುರೇಶ್ ‘ನನಗೆ ಮಾಹಿತಿ ಇಲ್ಲ’

ಶಾಸಕರ ಡಿನ್ನರ್ ಮೀಟಿಂಗ್: ಡಿ.ಕೆ. ಸುರೇಶ್ ‘ನನಗೆ ಮಾಹಿತಿ ಇಲ್ಲ’

by Shwetha
March 1, 2026
0

ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾದ ಶಾಸಕರ ಡಿನ್ನರ್ ಮೀಟಿಂಗ್ ಕುರಿತಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಣದ...

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಹಸ್ಯ ಸಮೀಕ್ಷೆ: ಕಾಂಗ್ರೆಸ್ ಸರ್ಕಾರದ 78 ಹಾಲಿ ಶಾಸಕರಿಗೆ ಸೋಲು ಕಟ್ಟಿಟ್ಟ ಬುತ್ತಿ?

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ ರಹಸ್ಯ ಸಮೀಕ್ಷೆ: ಕಾಂಗ್ರೆಸ್ ಸರ್ಕಾರದ 78 ಹಾಲಿ ಶಾಸಕರಿಗೆ ಸೋಲು ಕಟ್ಟಿಟ್ಟ ಬುತ್ತಿ?

by Shwetha
March 1, 2026
0

ಬೆಂಗಳೂರು: ಕರ್ನಾಟಕದ ರಾಜಕೀಯ ಅಂಗಳದಲ್ಲಿ ಚುನಾವಣೆಗಳು ಬಂದು ಹೋಗುವುದು ಸಹಜ. ಆದರೆ 2028ರ ವಿಧಾನಸಭಾ ಚುನಾವಣೆಗೆ ಇನ್ನೂ ಬರೋಬ್ಬರಿ ನಾಲ್ಕು ವರ್ಷಗಳಿರುವಾಗಲೇ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ರಹಸ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram