ಮಂಡ್ಯ: ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಹಲವು ವರ್ಷಗಳಿಂದ ನಡೆಯುತ್ತಾ ಬಂದಿದೆ. ಫಾರ್ಮ್‍ಹೌಸ್(ತೋಟದ ಮನೆ)ಗಳಲ್ಲಿ ರೇವ್ ಪಾರ್ಟಿ ಮೂಲಕ ಡ್ರಗ್ಸ್ ದಂಧೆ ಅವ್ಯಾಹತವಾಗಿ ಮುಂದುವರೆದಿದೆ ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ರಾಜಕಾರಣಿಗಳ ಬೆಂಬಲವೂ ಇದೆ. ಗೋವಾ, ಶ್ರೀಲಂಕಾಕಕ್ಕೆ ಕರೆದೊಯ್ದು ಇಸ್ಪೀಟ್ ಆಡಿಸುವಂತಹ ದಂಧೆಯೂ ಇದೆ ಎಂದರು.
ಬೆಂಗಳೂರು ಮಾತ್ರವಲ್ಲ, ನಾಗಮಂಗಲದಲ್ಲೂ ಡ್ರಗ್ಸ್ ಡಿಗುತ್ತೆ. ಆದರೂ ಪೊಲೀಸ್ ಇಲಾಖೆ ಕಣ್ಣುಮುಚ್ಚಿ ಕುಳಿತಿದೆ. ಇದರಿಂದ ಗ್ರಾಮಾಂತರ ಪ್ರದೇಶಕ್ಕೂ ಡ್ರಗ್ಸ್ ದಂಧೆ ವ್ಯಾಪಿಸುತ್ತಿದೆ. ಹೊರ ದೇಶಗಳಿಂದ ಬಂದಿರುವ ಪ್ರಜೆಗಳು ನಿರ್ಭೀತಿಯಿಂದ ಡ್ರಗ್ಸ್ ಮಾರುತ್ತಿದ್ದಾರೆ ಎಂದು ಶಿವರಾಮೇಗೌಡ ಆರೋಪಿಸಿದ್ದಾರೆ.
ಬೆಂಗಳೂರಿನ ಕಲ್ಯಾಣ ನಗರದಲ್ಲಿ ನಮ್ಮ ಶಾಲೆ ಇದೆ. ಶಾಲೆಯ ರಸ್ತೆಯಲ್ಲಿ ನೈಜೀರಿಯಾ, ಸೌತ್ ಆಫ್ರಿಕಾ ಪ್ರಜೆಗಳು ಡ್ರಗ್ಸ್ ಮಾರಾಟ ಮಾಡುತ್ತಾ ಸೇವನೆ ಮಾಡುತ್ತಾ ನಿಂತಿರುತ್ತಾರೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಆದರೆ, ಸ್ಯಾಂಡಲ್‍ವುಡ್ ಈ ಮಟ್ಟಕ್ಕೆ ಆಗಿರುವುದು ದುರ್ದೈವದ ಸಂಗತಿ ಎಂದರು.
ಡ್ರಗ್ಸ್ ದಂಧೆ ಮಟ್ಟ ಹಾಕಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯಡಿಯೂರಪ್ಪ ಸರ್ಕಾರ ಮಾತ್ರವಲ್ಲ, 20 ವರ್ಷಗಳ ಹಿಂದಿನಿಂದಲೂ ಡ್ರಗ್ಸ್ ದಂಧೆ ನಡೆಯುತ್ತಿದೆ. ಈಗ ಅದು ದೊಡ್ಡ ಮಟ್ಟಕ್ಕೆ ಹೋಗಿದೆ. ಜೆಡಿಎಸ್ ಸರ್ಕಾರ ಇದ್ದಾಗಲೂ ಡ್ರಗ್ಸ್ ದಂಧೆ ನಡೆಯುತ್ತಿತ್ತು. ನಮ್ಮದೇ ಪಕ್ಷದ ಮುಖಂಡರು ಗಾಂಜಾ ಸೇರಿದಂತೆ ಬೇರೆ ಬೇರೆ ಚÀಟುವಟಿಕೆಯಿಂದ ಬಂದ ಹಣದಲ್ಲೇ ಸರ್ಕಾರ ಬೀಳಿರುವ ಪ್ರಯತ್ನ ಮಾಡಿದ್ದರು. ಈ ದಂಧೆಗೆ ರಾಜಕಾರಣಿಗಳ ಬೆಂಬಲವೂ ಇದೆ ಎಂದು ಶಿವರಾಮೇಗೌಡ ಆರೋಪಿಸಿದ್ದಾರೆ.
*****
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









