ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ವರುಣನ ಆಗಮನವಾಗಿದ್ದು, ಜಿಲ್ಲಾದ್ಯಂತ ಉತ್ತಮ ಮಳೆಯಾಗಿದೆ. ಬಳ್ಳಾರಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಉತ್ತಮ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದೆ.
ಬಳ್ಳಾರಿಯಲ್ಲಿ ಉತ್ತಮ ಮಳೆಯಾಗಿದ್ದು ಜನರಿಗೆ ಸಂತಸ ತಂದಿರುವುದು ಒಂದೆಡೆಯಾದ್ರೆ, ಮತ್ತೊಂದೆಡೆ ಗ್ರಾಮಕ್ಕೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಬಳ್ಳಾರಿ ತಾಲೂಕಿನ ವೈ. ಕಗ್ಗಲ್ ಗ್ರಾಮಕ್ಕೆ ನೀರು ನುಗ್ಗಿ ರಸ್ತೆಗಳೆಲ್ಲಾ ಜಲಾವೃತಗೊಂಡ ಪರಿಣಾಮ ಜನರ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಅಲ್ಲದೇ ವಾಹನ ಸಂಚಾರವೂ ಬಂದ್ ಆಗಿದೆ.








