ADVERTISEMENT
Wednesday, August 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೇಂದ್ರದ ತಪ್ಪಿಗೆ ಜನ ದಂಡ ಕಟ್ಟಬೇಕೆನ್ನುವುದು ಅಸಹನೀಯ : ಪ್ರಿಯಾಂಕ್ ಖರ್ಗೆ

admin by admin
September 3, 2020
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಬೆಂಗಳೂರು : ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರ್ಥಿಕ ಕುಸಿತ ಶುರುವಾಗಿದ್ದು, ಈಗ ಕೊರೊನಾದ ನೆಪ ಇಟ್ಟುಕೊಂಡು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಜಿಎಸ್ ಟಿ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ. “ಜಿಎಸ್ ಟಿಯಲ್ಲಿನ ರಾಜ್ಯದ ಪಾಲು & ಪರಿಹಾರ ಪಾವತಿಸುವ ಬದಲಿಗೆ ಆರ್ ಬಿಐನಿಂದ ಸಾಲ ಪಡೆಯುವಂತೆ ಕೇಂದ್ರ ಸರ್ಕಾರ ನೀಡಿರುವ ಸಲಹೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ಜಿಎಸ್ ಟಿ ತೆರಿಗೆ ವಸೂಲಿಯಲ್ಲಿ ಉಂಟಾಗುವ ನಷ್ಟವನ್ನು 2020ರವರೆಗೆ ಕಟ್ಟಿಕೊಡುವ ಬದ್ಧತೆಯನ್ಜು ಕೇಂದ್ರ 2017ರ ಜಿಎಸ್‍ಟಿ ಕಾಯ್ದೆಯಲ್ಲಿ ವ್ಯಕ್ತಪಡಿಸಿದೆ. ಅದರಂತೆ ನಡೆದುಕೊಳ್ಳಬೇಕಿದೆ ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

Related posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

August 26, 2026
saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

August 26, 2026

ವಾಟ್ ಜಾರಿಯಲ್ಲಿದ್ದಾಗ ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು ಸಿಗುತ್ತಿತ್ತು. ಯುಪಿಎ ಸರ್ಕಾರ ರೂಪಿಸಿದ್ದ ಉತ್ತಮ ಜಿಎಸ್ ಟಿ ಕಾಯ್ದೆಯನ್ನು ನರೇಂದ್ರ ಮೋದಿ ಅವರ ಸರ್ಕಾರ ಅವೈಜ್ಞಾನಿಕವಾಗಿ ಬದಲಾವಣೆ ಮಾಡಿ ಜಾರಿಗೆ ತಂದಿದೆ. ಇದರಿಂದ ಆರ್ಥಿಕ ವ್ಯವಸ್ಥೆಗೆ ಹಾನಿಯಾಗಲಿದೆ ಎಂದು ಕಾಂಗ್ರೆಸ್ ಮೊದಲಿನಿಂದಲೂ ಹೇಳುತ್ತಾ ಬಂದಿದೆ.

ಪ್ರತಿಪಕ್ಷಗಳ ಮಾತನ್ನು ಕೇಳಿಸಿಕೊಳ್ಳದ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರ, ತಾನು ಮಾಡಿದ ತಪ್ಪಿಗೆ ದೇಶದ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಅಸಹನೀಯ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಆರ್ಥಿಕ ಕುಸಿತ ಶುರುವಾಗಿದ್ದು, ಈಗ ಕೊರೊನಾದ ನೆಪ ಇಟ್ಟುಕೊಂಡು ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ.

ಭಾವನಾತ್ಮಕ ವಿಷಯಗಳನ್ನ ಕೇಂದ್ರಿಕರಿಸಿ ಧ್ವೇಷ ರಾಜಕೀಯದಿಂದ ಅಭಿವೃದ್ಧಿಯನ್ನು ಹಳ್ಳ ಹಿಡಿಸಿದ ಬಿಜೆಪಿ, ತಾನು ಮಾಡಿದ ತಪ್ಪಿಗೆ ಜನ ದಂಡ ಕಟ್ಟಬೇಕೆಂದು ಬಯಸುತ್ತಿರುವುದು ಹಿಟ್ಲರ್ ಧೋರಣೆ. ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಷದ ಮುಲಾಜಿಗೆ ಒಳಗಾಗದೆ, ರಾಜ್ಯದ ಹಿತದೃಷ್ಟಿಯಿಂದ ಕೇಂದ್ರ ಸಚಿವರ ಸಲಹೆಯನ್ನು ಸರಾಸಗಟಾಗಿ ತಿರಸ್ಕರಿಸಬೇಕಿದೆ.

ಕೇಂದ್ರ ಹಣಕಾಸು ಸಚಿವೆ ಸಲಹೆ ಒಪ್ಪಿಕೊಂಡು ಸಾಲ ಪಡೆದಿದ್ದೆ ಆದರೆ ಅದರ ಬಡ್ಡಿ ಹೊರೆಯನ್ನು ರಾಜ್ಯದ ಜನರು ಹೊರಬೇಕಾಗುತ್ತದೆ. ನಮ್ಮ ತೆರಿಗೆಯನ್ನು ಕೊಟ್ಟು, ಅದರ ಹಿಡಗಂಟಿನ ಮೇಲೆ ಸಾಲ ಪಡೆದು, ಅದಕ್ಕೆ ಮತ್ತೆ ನಾವೇ ಬಡ್ಡಿ ಕಟ್ಟುವುದು ಎಂತಹ ಶಿಕ್ಷೆ. 25 ಜನ ಸಂಸದರನ್ನು ಆರಿಸಿ ಕಳುಹಿಸಿದ್ದಕ್ಕಾಗಿ ಕನ್ನಡಿಗರಿಗೆ ಈ ಶಿಕ್ಷೆಯೇ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿರುವ ರಾಜ್ಯದ ಬೊಕ್ಕಸಕ್ಕೆ ಸಾಲದ ಹೊರೆ ಹೊರಿಸಿದರೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ. ಅತಿವೃಷ್ಠಿ, ಅನಾವೃಷ್ಠಿಗಳಿಗೆ ಪರಿಹಾರ ಜೊತೆ ತೆರಿಗೆ ಪಾಲನ್ನೂ ನಿರಾಕರಿಸಿರುವ ಬಿಜೆಪಿಯ ಈ ನಡೆಯಿಂದಾಗಿ, ಕನ್ನಡಿಗರಿಗೆ ಮೋದಿ ಜಿಎಸ್ ಟಿ ಜೊತೆಗೆ ಆರ್ ಬಿಐ ಸಾಲ + ಬಿಜೆಪಿ ಬಡ್ಡಿಯನ್ನೂ ಪಾವತಿಸುವ ಕರ್ಮ ಎದುರಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

Tags: #saakshatv.comBJPCongressGSTNarendra modiPriyank Karge
ShareTweetSendShare
Join us on:

Related Posts

saakshatv.com/shivarajkumar-pan-india-movie-koormavatar-official-announcement

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ಪ್ಯಾನ್-ಇಂಡಿಯಾ ಸಿನಿಮಾ ‘ಕೂರ್ಮಾವತಾರ್’ ಅಧಿಕೃತ ಘೋಷಣೆ; ಕುತೂಹಲ ಮೂಡಿಸಿದ ಟೈಟಲ್ ಟೀಸರ್

by admin
August 26, 2026
0

ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ 'ಕೂರ್ಮಾವತಾರ'ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ...

saakshatv.com/dr-vishnuvardhan-75th-birth-anniversary-amruthamahotsava-grand-event-bengaluru

ಸೆಪ್ಟೆಂಬರ್ 27ರಂದು ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’

by admin
August 26, 2026
0

ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮವರ್ಷದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ಡಾ. ವಿಷ್ಣುವರ್ಧನ್ ಅಮೃತಮಹೋತ್ಸವ’ ಕಾರ್ಯಕ್ರಮದ ಕುರಿತು ಮಾಹಿತಿ ನೀಡಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ...

saakshatv.com/karthik-sharma-directorial-bhavantara-kannada-movie-ready-for-release

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

by admin
August 26, 2026
0

ಬೆಂಗಳೂರು: ‘ವೀರ ಕನ್ನಡಿಗ’, ‘ಮ್ಯಾಜಿಕ್ ಅಜ್ಜಿ’ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಾಲನಟನಾಗಿ ಹಾಗೂ 100ಕ್ಕೂ ಹೆಚ್ಚು ಧಾರಾವಾಹಿ-ಟಿವಿ ಶೋಗಳಿಗೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ಶರ್ಮ,...

saakshatv.com/nagabhushana-new-movie-announced-on-birthday-kasturi-talkies

ನಾಗಭೂಷಣ್ ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ; 90ರ ದಶಕದ ಫ್ಯಾಮಿಲಿ ಡ್ರಾಮಾದಲ್ಲಿ ‘ಟಗರು ಪಲ್ಯ’ ಹೀರೋ

by admin
August 26, 2026
0

ಬೆಂಗಳೂರು: ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ, 'ಟಗರು ಪಲ್ಯ' ಖ್ಯಾತಿಯ ನಾಗಭೂಷಣ್ ಅವರ ಜನ್ಮದಿನದ ಪ್ರಯುಕ್ತ ಅವರ ಹೊಸ ಚಿತ್ರದ ಅಧಿಕೃತ ಘೋಷಣೆಯಾಗಿದೆ. ಕಸ್ತೂರಿ ಟಾಕೀಸ್ ಬ್ಯಾನರ್‌ನಡಿ ನಿರ್ಮಾಪಕ...

saakshatv.com/sai-durga-tej-sambarala-yeti-gattu-shooting-completed-release-date-announced

ಸಾಯಿ ದುರ್ಗಾ ತೇಜ್ ನಟನೆಯ ಪ್ಯಾನ್-ಇಂಡಿಯಾ ಸಿನಿಮಾ ‘ಸಂಬರಾಲ ಯೇಟಿ ಗಟ್ಟು’ ಶೂಟಿಂಗ್ ಕಂಪ್ಲೀಟ್; 2027ರ ಸಂಕ್ರಾಂತಿಗೆ ರಿಲೀಸ್

by admin
August 26, 2026
0

ಮೆಗಾ ಸುಪ್ರೀಂ ಹೀರೋ ಸಾಯಿ ದುರ್ಗಾ ತೇಜ್ ಅಭಿನಯದ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಆ್ಯಕ್ಷನ್-ಡ್ರಾಮಾ 'ಸಂಬರಾಲ ಯೇಟಿ ಗಟ್ಟು' (SYG) ಚಿತ್ರದ ಸಂಪೂರ್ಣ ಚಿತ್ರೀಕರಣ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಪ್ರತಿಷ್ಠಿತ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram