ಬೆಂಗಳೂರು: ಬರುವ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದ 276 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಈ ಬಗ್ಗೆ ಮಾತನಾಡಿರುವ ಅವರು ಈ ಕುರಿತು ಇಂದು ನಡೆದಿರುವ ಸಂಪುಟ ಸಭೆಯಲ್ಲಿ ತೀರ್ಮಾನಿಸಿಲಾಗಿದೆ ಎಂದಿದ್ದಾರೆ.
ಸರ್ಕಾರ ಎಲ್ ಕೆಜಿ, ಯುಕೆಜಿ ಆರಂಭದ ಕುರಿತು ಗಂಭೀರ ಚಿಂತನೆ ನಡೆಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಶಿಕ್ಷಣ ಆರಂಭಿಸಲಿದೆ. ಹಾಗೆಯೇ ಇದಕ್ಕೆ ಬೇಕಾಗಿರುವ ಎಲ್ಲ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಲಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ ಎಂದು ತಿಳಿಸಿದ್ದಾರೆ.








