ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಿತು. ಸಭೆಯಲ್ಲಿ ರಾಜ್ಯ ಸರ್ಕಾರವನ್ನು ಕಟ್ಟಿ ಹಾಕುವ ಬಗ್ಗೆ ತಂತ್ರಗಳನ್ನು ರೂಪಿಸಿದ್ದರು ಎನ್ನಲಾಗಿದೆ. ಅಲ್ಲದೆ ಬಜೆಟ್ ಮೇಲಿನ ಚರ್ಚೆಯ ಸಮಯದಲ್ಲಿ ಯಾವ ವಿಚಾರ ಪ್ರಸ್ತಾಪ ಮಾಡಬೇಕು, ಯಾವ ವಿಚಾರ ಪ್ರಸ್ತಾಪ ಮಾಡಬಾರದು ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಮಾರ್ಗದರ್ಶನ ಮಾಡಿದ್ದಾರೆ. ಜೊತೆಗೆ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲಕ್ಕೆ ಒಳಗಾಗಿರುವ ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರ ನಡೆಯ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಇದೆ ವೇಳೆ ಶಾಸಕಾಂಗ ಪಕ್ಷದ ನೂತನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಶಾಸಕ ತುಕಾರಾಂ ಅವರನ್ನು ಅಭಿನಂದಿಸಲಾಯಿತು.
ಮೇಲ್ಮನೆ ಕದನ…ಸೋಲು ಗೆಲುವಿನ ಲೆಕ್ಕಾಚಾರ..!
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಏಳು ಸ್ಥಾನಗಳಿಗೆ ಎಂಟು ಅಭ್ಯರ್ಥಿಗಳು ಕಣಕ್ಕಿಳಿದಿರುವುದರಿಂದ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿದೆ. ಕಾಂಗ್ರೆಸ್ ಐದು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ-ಜೆಡಿಎಸ್ ಮೈತ್ರಿ ಮೂರು...






