ಬೆಂಗಳೂರು : ರಾಜ್ಯ ಚುನಾವಣೆ ಆಯೋಗ ಕೋವಿಡ್ ಹಿನ್ನೆಲೆ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆ ವೇಳೆ ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳನ್ನು ಪ್ರಕಟಿಸಿದೆ.
ಚುನಾವಣಾ ಆಯೋಗ ಮಾರ್ಗಸೂಚಿಯಲ್ಲಿ ಏನಿದೆ..?
ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಪ್ರತಿಯೊಬ್ಬರು ಮಾಸ್ಕ್ ಧರಿಸಿರಬೇಕು.
ಚುನಾವಣಾ ಕೊಠಡಿಗಳಿಗೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರು ಸ್ಯಾನಿಟೈಸರ್ ಬಳಕೆ ಕಡ್ಡಾಯ.
ಚುನಾವಣೆಗೆ ಸಂಬಂಧಿಸಿದ ಸಾಮಗ್ರಿಗಳನ್ನು ಸೋಂಕು ನಿವಾರಕ ಕೊಠಡಿಯಲ್ಲಿಡಬೇಕು.
ಚುನಾವಣಾಧಿಕಾರಿಗಳು ನಾಮಪತ್ರ ಸ್ವೀಕರಿಸುವಾಗ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ
ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು ಸುರಕ್ಷಿತ ಅಂತರ ಕಾಯ್ದುಕೊಳ್ಳಬೇಕು / ಮಾಸ್ಕ್ ಕಡ್ಡಾಯ
ಕೋವಿಡ್ ಸೋಂಕಿತ ವ್ಯಕ್ತಿ ನಾಮಪತ್ರ ಸಲ್ಲಿಸಬೇಕಾದರೆ ಸೂಚಕರ ಮೂಲಕ ನಾಮಪತ್ರ ಸಲ್ಲಿಸಬೇಕು.
ಪ್ರಚಾರದ ವೇಳೆ ಅನುಸರಿಸಬೇಕಾದ ಕ್ರಮಗಳೇನು?
ಪ್ರಚಾರದ ವೇಳೆ ಅಭ್ಯರ್ಥಿಗಳು ಸುರಕ್ಷಿತ ಅಂತರವನ್ನು ಕಾಯ್ದುಕೊಂಡು ಪ್ರಚಾರ ಮಾಡಬೇಕು.
ಪ್ರಚಾರದ ವೇಳೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ
ಐದು ಮಂದಿ ಮಾತ್ರ ಪ್ರಚಾರದಲ್ಲಿ ತೊಡಗಬೇಕು
ಕರಪತ್ರಗಳನ್ನು ಹಂಚುವಾಗ ಮಾಸ್ಕ್ ಧರಿಸಿರಬೇಕು
ಪ್ರಚಾರಕ್ಕಾಗಿ ಲೌಡ್ ಸ್ಪೀಕರ್ ಬಳಕೆ ಮಾಡುವಂತಿಲ್ಲ
ಕೋವಿಡ್ ಸೋಂಕಿತ ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದು.
ಮತದಾನದ ವೇಳೆ ಮತಗಟ್ಟೆಗೆ ಗರಿಷ್ಟ 1000 ಮತದಾರರು ಮಾತ್ರ ಇರುವಂತೆ ಮತಗಟ್ಟೆಗಳನ್ನು ಗುರುತಿಸುವುದು.
ಮತದಾನಕ್ಕೆ ನಿಗದಿಪಡಿಸಿದ ಕೊಠಡಿಯನ್ನು ಹಾಗೂ ಅಕ್ಕಪಕ್ಕದ ಕೊಠಡಿಗಳನ್ನು ಶೇ.1ಸೋಡಿಯಂ ಹೈಪೋಕ್ಲೋರೈಡ್ ದ್ರಾವಣವನ್ನು ಸಿಂಪಡಿಸಿ ಸಿದ್ಧಗೊಳಿಸುವುದು.
ಮಾಸ್ಟರಿಂಗ್ ದಿನ ಸಂಜೆ ಮತದಾನ ಸಿಬ್ಬಂದಿಗೆ ಉಳಿದುಕೊಳ್ಳಲು ಸ್ಯಾನಿಟೈಸ್ ಮಾಡಿದ ಪಕ್ಕದ ಕೊಠಡಿಗಳನ್ನು ನೀಡಬೇಕು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ. 








