ಬೆಂಗಳೂರು: ಸ್ಯಾಂಡಲ್‍ವುಡ್‍ನ ನಶೆ ಬೆಡಗಿ ರಾಗಿಣಿ ದ್ವಿವೇದಿಗೆ ಇನ್ನೂ ಮೂರು ದಿನ ಸಿಸಿಬಿ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ನೀಡಿದೆ.
ರಾಗಿಣಿಯನ್ನು ಬಂಧಿಸಿದ ಬಳಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಎದುರು ಸಿಸಿಬಿ ಪೊಲೀಸರು ಹಾಜರುಪಡಿಸಿದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಆರೋಪಿ ರಾಗಿಣಿಯನ್ನು ಸೋಮವಾರದವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಹೀಗಾಗಿ ನಾಳೆ ಕೋರ್ಟ್‍ಗಳಿಗೆ ರಜೆ ಇರುವ ಕಾರಣ ಸೋಮವಾರದವರೆಗೆ ಸಿಸಿಬಿ ಪೊಲೀಸ್ ಕಸ್ಟಡಿಯಲ್ಲಿರುವುದು ರಾಗಿಣಿಗೆ ಅನಿವಾರ್ಯವಾಗಿದೆ. ಸೋಮವಾರದ ನಂತರ ಕೋರ್ಟ್‍ಗೆ ಜಾಮೀನು ಅರ್ಜಿ ಸಲ್ಲಿಸಿದ ನಂತರ ಮುಂದಿನ ಪ್ರಕ್ರಿಯೆಗಳು ನಡೆಯಲಿದೆ.
3 ದಿನ ಕಸ್ಟಡಿಗೆ ಪಡೆದ ನಂತರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಹಾಗೂ ಕೋವಿಡ್ ಪರೀಕ್ಷೆಯನ್ನು ರಾಗಿಣಿಗೆ ನಡೆಸಲಾಯಿತು. ಸಿಗರೇಟ್‍ನಲ್ಲಿ ಗಾಂಜಾ ಸೇವಿಸುತ್ತಿದ್ದ ಕಾರಣ ರಾಗಿಣಿಯ ರಕ್ತದ ಮಾದರಿಯನ್ನು ಎಫ್‍ಎಸ್‍ಎಲ್ ಕೇಂದ್ರಕ್ಕೆ ರವಾನಿಸಲಾಗಿದೆ.
ಇಂದು ರಾತ್ರಿ ಮಹಿಳಾ ಕೇಂದ್ರದಲ್ಲಿ ವಾಸ್ತವ್ಯಕ್ಕೆ ಸಿಸಿಬಿ ಪೊಲೀಸರು ವ್ಯವಸ್ಥೆ ಮಾಡಿದ್ದಾರೆ. ನಾಳೆ ಬೆಳಿಗ್ಗೆಯಿಂದ ಮೂರು ದಿನ ಮತ್ತೆ ರಾಗಿಣಿಯನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಲಿದ್ದಾರೆ.
ಪಂಚಮಸಾಲಿ ಪ್ರತಿಭಟನೆ ಗಾಯದ ಮೇಲೆ ‘ಉಪ್ಪು’ ಸವರಿದ CM & ಕಿಚ್ಚು ಹೊತ್ತಿಸಿದ ‘ಪರಂ’..!
ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂದೆ ಪಂಚಮಸಾಲಿ ಲಿಂಗಾಯತ ಸಮುದಾಯದ ಮೇಲಿನ ಲಾಠಿಚಾರ್ಜ್ ಸಂಬಂಧ ಸಮುದಾಯದ ಹೋರಾಟದ ಕಿಚ್ಚು ಜ್ವಾಲಾಮುಖಿಯಾಗಿ ಸರ್ಕಾರದ ಅಡಿಪಾಯಕ್ಕೆ ಬಿಸಿಮುಟ್ಟಿಸತೊಡಗಿದೆ ಈ ಬಗ್ಗೆ ಇನ್...