ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಯ ಮತ್ತೊಬ್ಬ ಕಿಂಗ್‍ಪಿನ್‍ನನ್ನು ಸಿಸಿಬಿ ಪೊಲೀಸರು ದೆಹಲಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ಹೈಫೈ ಪಾರ್ಟಿಗಳನ್ನು ಆಯೋಜಿಸುತ್ತಿದ್ದ ವೀರೇನ್ ಖನ್ನಾ ಎಂಬಾತನನ್ನು ಸಿಸಿಬಿ ಇನ್ಸ್‍ಪೆಕ್ಟರ್‍ಗಳಾದ ಶ್ರೀಧರ್, ಲಕ್ಷ್ಮಿಕಾಂತ್ ದೆಹಲಿಯಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಆರೋಪಿಯನ್ನು 4 ನಾಲ್ಕು ದಿನಗಳ ಸಿಸಿಬಿ ಕಸ್ಟಡಿಗೆ ನೀಡಿದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಯಲ್ಲಿ ಇಂದು ಆತನ ತೀವ್ರ ವಿಚಾರಣೆ ನಡೆಯಲಿದೆ.
ಬೆಂಗಳೂರು, ದೆಹಲಿ, ಮುಂಬೈ ಹಾಗೂ ಗೋವಾದಲ್ಲಿ ದೊಡ್ಡ ದೊಡ್ಡ ಪಾರ್ಟಿಗಳನ್ನು ವೀರೇನ್ ಖನ್ನಾ ಆಯೋಜಿಸುತ್ತಿದ್ದ. ಪಾರ್ಟಿಗಳಿಗೆ ಸ್ಟಾರ್ ನಟ-ನಟಿಯರನ್ನು ಕರೆದುಕೊಂಡು ಹೋಗುತ್ತಿದ್ದ ವೀರೇನ್ ಖನ್ನಾ, ಪಾರ್ಟಿಗಳಲ್ಲಿ ಡ್ರಗ್ಸ್ ಸಪ್ಲೆ ಮಾಡುತ್ತಿದ್ದನಂತೆ.



ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದಿದ್ದ ವೀರೇನ್ ಖನ್ನಾ ದೆಹಲಿಯಲ್ಲಿ ವಾಸವಿದ್ದಾನೆ. ಭಾರತದ ಮಾತ್ರವಲ್ಲದೆ ವಿದೇಶಗಳಿಗೆ ನಟ-ನಟಿಯರು, ಶ್ರೀಮಂತರು, ರಾಜಕಾರಣಿಗಳ ಮಕ್ಕಳನ್ನು ಕರೆದೊಯ್ದು ಡ್ರಗ್ಸ್ ಪಾರ್ಟಿ ಆಯೋಜಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ.
ವೀರೇನ್ ಖನ್ನಾ ಜತೆ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ನಿಕಟ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಸಂಜನಾ ಗಲ್ರಾನಿ ಆಪ್ತ ರಾಹುಲ್ ಜತೆ ವೀರೇನ್ ಖನ್ನಾ ನಿರಂತರ ಸಂಪರ್ಕ ಹೊಂದಿದ್ದ. ವೀರೇನ್ ಖನ್ನಾ ಹಾಗೂ ರಾಹುಲ್ ಪಾರ್ಟಿಗಳನ್ನು ಆಯೋಜಿಸಿ ನಟ-ನಟಿಯರನ್ನು ಕರೆಸುತ್ತಿದ್ದರಂತೆ.
ಡ್ರಗ್ ಪೆಡ್ಲರ್ ಆಗಿ ಕೆಲಸ ಮಾಡುತ್ತಿದ್ದ ವೀರೇನ್ ಖನ್ನಾ ಜತೆ ಸಂಪರ್ಕ ಹೊಂದಿದ್ದ ನಟ-ನಟಿಯರು, ರಾಜಕಾರಣಿಗಳ ಬಗ್ಗೆ ಮಕ್ಕಳಿಗೆ ನಡುಕ ಶುರುವಾಗಿದೆ. ಇಂದು ರಾಗಿಣಿ-ವೀರೇನ್ ಖನ್ನಾ ಮುಖಾಮುಖಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಇದೇ ವೇಳೆ, ವೀರೇನ್ ಖನ್ನಾ ಜತೆ ನಟಿ ಸಂಜನಾ ಗಲ್ರಾನಿ ಸಂಪರ್ಕ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ಸಂಜನಾಗೆ ಇಂದು ಸಿಸಿಬಿ ಪೊಲೀಸರು ನೋಟಿಸ್ ನೀಡುವ ಸಾಧ್ಯತೆ ಇದೆ.
********************
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









