ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಿ-ಟ್ವೆಂಟಿ ಸರಣಿ- ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‍ಗೆ ರೋಚಕ ಜಯ

admin by admin
September 5, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಟಿ-ಟ್ವೆಂಟಿ ಸರಣಿ- ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್‍ಗೆ ರೋಚಕ ಜಯ

ಪ್ರವಾಸಿ ಆಸ್ಟ್ರೇಲಿಯಾ ಮೊದಲ ಟಿ-ಟ್ವೆಂಟಿ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಎರಡು ರನ್ ಗಳಿಂದ ಸೋಲು ಅನುಭವಿಸಿದೆ. ಕಡೆಯ ಓವರ್‍ನಲ್ಲಿ ಆಸ್ಟ್ರೇಲಿಯಾ ತಂಡ ಗೆಲ್ಲಲು 15 ರನ್ ಗಳು ಬೇಕಾಗಿದ್ದವು. ಆದ್ರೆ ಇಂಗ್ಲೆಂಡ್ ಬೌಲರ್ ಟಾಮ್ ಕುರನ್ ಅವರು 12 ರನ್ ನೀಡಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು. ಆಸ್ಟ್ರೇಲಿಯಾದ ಮಾರ್ಕಸ್ ಸ್ಟೋರಿಸ್ ಅವರು ದಿಟ್ಟ ಹೋರಾಟ ನೀಡಿದ್ರೂ ತಂಡಕ್ಕೆ ಗೆಲುವು ದಕ್ಕಿಸಿಕೊಡಲು ವಿಫಲರಾದ್ರು.
ಸೌತಾಂಪ್ಟನ್ ನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಇಂಗ್ಲೆಂಡ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತ್ತು. ಆರಂಭದಿಂದಲೇ ಜೋಸ್ ಬಟ್ಲರ್ ಅವರು ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ್ರು. ಕೇವಲ 4 ಓವರ್ ಗಳಲ್ಲಿ ಇಂಗ್ಲೆಂಡ್ ತಂಡ 43 ರನ್ ಗಳಿಸಿತ್ತು. ಈ ಹಂತದಲ್ಲಿ ಎಂಟು ರನ್ ಗಳಿಸಿದ್ದ ಜೋನಿ ಬೇರ್ ಸ್ಟೋವ್ ಅವರು ಎಂಟು ರನ್ ಗಳಿಸಿ ಪೆವಿಲಿಯನ್ ಹಾದಿ ಹಿಡಿದ್ರು. ಹಾಗೇ 29 ಎಸೆತಗಳಲ್ಲಿ 5 ಬೌಂಡರಿ ಮತ್ತು ಎರಡು ಸಿಕ್ಸರ್ ಸಿಡಿಸಿ 44 ರನ್ ಗಳಿಸಿದ್ದ ಜೋಸ್ ಬಟ್ಲರ್ ಕೂಡ ತನ್ನ ಹೋರಾಟವನ್ನು ಮುಗಿಸಿದ್ರು.
ನಂತರ ಡೇವಿಡ್ ಮಲಾನ್ ಅವರು ಆಕ್ರಮಣಕಾರಿ ಆಟದ ಜೊತೆ ಜವಾಬ್ದಾರಿಯುತವಾಗಿ ಬ್ಯಾಟ್ ಬೀಸಿ ತಂಡದ ಮೊತ್ತವನ್ನು ಏರಿಸಿದ್ರು. ಒಂದು ಕಡೆ ವಿಕೆಟ್ ಉರುಳುತ್ತಿದ್ರೂ ಡೇವಿಡ್ ಮಲಾನ್ ಅವರು 18 ಓವರ್ ಗಳ ತನಕ ಕ್ರೀಸ್ ನಲ್ಲಿ ಉಳಿದು ತಂಡದ ಮೊತ್ತವನ್ನು 150ರ ಗಡಿ ಸಮೀಪಿಸಿದ್ರು. ಅಂತಿಮವಾಗಿ ಇಂಗ್ಲೆಂಡ್ ತಂಡ ಏಳು ವಿಕೆಟ್ ನಷ್ಟಕ್ಕೆ 162 ರನ್ ದಾಖಲಿಸಿತ್ತು.
ಗೆಲ್ಲಲು 163 ರನ್ ಗಳ ಸವಾಲನ್ನು ಬೆನ್ನಟ್ಟಿದ್ದ ಆಸ್ಟ್ರೇಲಿಯಾ ತಂಡಕ್ಕೆ ಡೇವಿಡ್ ವಾರ್ನರ್ ಮತ್ತು ನಾಯಕ ಆರೋನ್ ಫಿಂಚ್ ಅವರು ಮೊದಲ ವಿಕೆಟ್‍ಗೆ 98 ರನ್ ಕಲೆ ಹಾಕಿದ್ರು. ಈ ಹಂತದಲ್ಲಿ ನಾಯಕ ಆರೋನ್ ಫಿಂಚ್ ಅವರು 46 ರನ್ ಗಳಿಸಿ ಔಟಾದ್ರು. ನಂತರ ಸ್ಟೀವನ್ ಸ್ಮಿತ್ 18 ರನ್ ಗೆ ಸೀಮಿತವಾದ್ರೆ, ಗ್ಲೇನ್ ಮ್ಯಾಕ್ಸ್ ವೆಲ್ ಒಂದು ರನ್ ಗಳಿಸಿ ನಿರಾಸೆ ಅನುಭವಿಸಿದ್ರು. ಮತ್ತೊಂದೆಡೆ ಡೆವಿಡ್ ವಾರ್ನರ್ 58 ರನ್ ದಾಖಲಿಸಿ ಪೆವಿಲಿಯನ್‍ಗೆ ಹಿಂತಿರುಗಿದ್ರು. ಹಾಗೇ ಅಲೆಕ್ಸ್ ಕಾರೇಯ್ 1 ರನ್ ಹಾಗೂ ಆಶ್ಟನ್ ಆಗರ್ ರನ್ ಗಳಿಸುವ ಆತುರದಲ್ಲಿ ರನೌಟಾದ್ರು. ಅಂತಿಮವಾಗಿ ಮಾರ್ಕಸ್ ಸ್ಟೋರಿಸ್ (ಅಜೇಯ 23) ಗೆಲುವಿಗಾಗಿ ಹೋರಾಟ ನಡೆಸಿದ್ರೂ ಪ್ರಯೋಜನವಾಗಲಿಲ್ಲ. ಡೇವಿಡ್ ಮಲಾನ್ ಅವರು ಪಂದ್ಯ ಶ್ರೇಷ್ಠರಾಗಿ ಹೊರಹೊಮ್ಮಿದ್ರು. ಈ ಗೆಲುವಿನೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026
Tags: # Australia by two runs#David Warner.#devid malan#England beat Australia by two runs#Marcus StoinisEnglandj#jose butler
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram