ಶಿಕ್ಷಕರ ದಿನಾಚರಣೆಯಂದು ಗುರುವೃಂದಕ್ಕೆ ಕೃತಜ್ಞತೆಯನ್ನು ಅರ್ಪಿಸಿದ ಪ್ರಧಾನಿ ಮೋದಿ
ಹೊಸದಿಲ್ಲಿ, ಸೆಪ್ಟೆಂಬರ್05: ಶಿಕ್ಷಕರ ದಿನಾಚರಣೆಯಂದು ಎಲ್ಲಾ ಶಿಕ್ಷಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಶುಭ ಹಾರೈಸಿದ್ದಾರೆ ಮತ್ತು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. #OurTeachersOurHeros ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ‘ಮನಸ್ಸನ್ನು ರೂಪಿಸಲು ಮತ್ತು ನಮ್ಮ ರಾಷ್ಟ್ರವನ್ನು ನಿರ್ಮಿಸಲು ಅವರು ನೀಡಿದ ಶ್ರಮಕ್ಕೆ ನಾವು ಕೃತಜ್ಞರಾಗಿದ್ದೇವೆ . ಶಿಕ್ಷಕರ ದಿನದಂದು, ನಮ್ಮ ಶಿಕ್ಷಕರ ಗಮನಾರ್ಹ ಪ್ರಯತ್ನಗಳಿಗಾಗಿ ನಾವು ಅವರಿಗೆ ಕೃತಜ್ಞತೆಯನ್ನು ಅರ್ಪಿಸುತ್ತೇವೆ. ಡಾ.ಎಸ್.ರಾಧಾಕೃಷ್ಣನ್ ಅವರ ಜಯಂತಿಯಂದು ಅವರಿಗೆ ನಾವು ಗೌರವ ಸಲ್ಲಿಸುತ್ತೇವೆ ಎಂದು ಶುಭಾಶಯ ತಿಳಿಸಿದ್ದಾರೆ.
We remain grateful to the hardworking teachers for their contributions towards shaping minds and building our nation. On Teachers Day, we express gratitude to our teachers for their remarkable efforts. We pay tributes to Dr. S. Radhakrishnan on his Jayanti. #OurTeachersOurHeroes
— Narendra Modi (@narendramodi) September 5, 2020
ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಈ ಸಂದರ್ಭದಲ್ಲಿ ವಿಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದು, ಅವರು ತಮ್ಮ ಶಿಕ್ಷಕರಿಗೆ ಮತ್ತು ಪೋಷಕರಿಗೆ ಧನ್ಯವಾದ ಹೇಳಬೇಕೆಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ಪೋಷಕರು ಮಗುವಿನ ಮೊದಲ ಶಿಕ್ಷಕರು ಎಂದು ಸಚಿವರು ಹೇಳಿದ್ದಾರೆ. ಭಾರತೀಯ ಸಂಸ್ಕೃತಿಯಲ್ಲಿ, ಶಿಕ್ಷಕರು ಅತ್ಯಂತ ಗೌರವಾನ್ವಿತರು, ಆದ್ದರಿಂದ ‘ನಾನು ಶಿಕ್ಷಕರಿಗೆ ನಮಸ್ಕರಿಸುತ್ತೇನೆ ಮತ್ತು ಅವರನ್ನು ಅಭಿನಂದಿಸುತ್ತೇನೆ’ ಎಂದು ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.
मैं शिक्षक-दिवस पर सभी देशवासियों को शुभकामनाएं देता हूं और सभी गुरुजन-वृंदों को प्रणाम करता हूं।
आइए, शिक्षक दिवस के इस उपलक्ष्य में हम अपने शिक्षकों, परामर्शदाताओं एवं माता-पिता का धन्यवाद करें, जिनके आशीर्वाद से हमने बहुत कुछ सीखा है।#OurTeachersOurHeroes #TeachersFromIndia pic.twitter.com/gQukZDugvE— Dr. Ramesh Pokhriyal Nishank (@DrRPNishank) September 5, 2020