ಬಾಗಲಕೋಟೆ : ಡ್ರಗ್ ಜಾಲದೊಂದಿಗೆ ನಂಟಿನ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ಯಾರು ಅಂತಾನೇ ಗೊತ್ತಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಗೋವಿಂದ ಕಾರಜೋಳ ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ರಾಗಿಣಿ ಯಾರೂ ಅಂತಾನೇ ಗೊತ್ತಿಲ್ಲ. ಯಾರೇ ತಪ್ಪು ಮಾಡಿದ್ದರೂ ಸರ್ಕಾರ ಅಂತವರ ಮೇಲೆ ಕಠಿಣ ಕ್ರಮ ಜರುಗಿಸುತ್ತೇವೆ. ಸಾಮಾನ್ಯರ ಇಲ್ಲ ಅಧಿಕಾರಿಗಳ ಮಕ್ಕಳೇ ಆಗಿದ್ರೂ ದೇಶದ ಕಾನೂನು ಎಲ್ಲರಿಗೂ ಒಂದೇ ಎಂದರು.
ಡ್ರಗ್ಸ್ ಹಗರಣದಲ್ಲಿ ಭಾಗಿಯಾಗಿರುವವರ ಮೇಲೆ ಕ್ರಮ ಶುರುವಾಗಿದೆ. ತನಿಖೆ ಹಂತದಲ್ಲಿದೆ. ತನಿಖೆ ಮುಗಿಯುವವರೆಗೆ ಏನೂ ಹೇಳಲು ಆಗಲ್ಲ. ವಿಷಯವನ್ನು ಗೌಪ್ಯವಾಗಡಿಬೇಕಾಗುತ್ತೆ. ತನಿಖೆ ಮುಗಿದ ತಕ್ಷಣ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಸುವ ಮುಂಚೆ ಮಾಹಿತಿ ನೀಡಲಾಗುತ್ತದೆ. ಇದರಿಂದ ಆರೋಗ್ಯಕ್ಕೆ ಕುತ್ತು ಬರುತ್ತದೆ ಎಂಬ ಅರಿವು ಇರಬೇಕು. ಸಮಾಜದಲ್ಲಿ ಇಂತಹ ಚಟುವಟಿಕೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಎಲ್ಲವೂ ಪೊಲೀಸರಿಂದ ಸರಿಮಾಡಲು ಸಾಧ್ಯವಿಲ್ಲ. ಯಾರೇ ತಪ್ಪು ಮಾಡಿದರೂ ಶಿಕ್ಷೆ ವಿಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.