ಕೊರೋನಾ ಕುರಿತು ಆತಂಕ ಬೇಡ, ಆರೋಗ್ಯ ಇಲಾಖೆ ಸೂಚಿಸಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ ಸೋಂಕನ್ನು ತಡೆಗಟ್ಟಲು ಸಹಕರಿಸಿ ಎಂದು ಜನರಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಾಲ್ಕು ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು ಕರ್ನಾಟಕದಲ್ಲಿ ನಾಲ್ಕು ಮಂದಿಗೆ ಸೋಂಕು ತಗುಲಿರುವುದು ದೃಢ ಪಟ್ಟಿದೆ. ರಾಜ್ಯದ ಇತರೆಡೆ ಈ ಸೋಂಕು ಹರಡದಂತೆ ತಡೆಗಟ್ಟಲು ರಾಜ್ಯ ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಂಡಿದೆ. ನಾಗರಿಕರು ಆತಂಕಕ್ಕೆ ಒಳಗಾಗದೆ, ಮುನ್ನೆಚ್ಚರಿಕಾ ಕ್ರಮ ಪಾಲಿಸುವ ಜತೆಗೆ ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು ಎಂದರು.
ಈಗಾಗಲೇ ಕೊರೋನಾ ಸೋಂಕಿತರು ಸಂಪರ್ಕಿಸಿದ ವ್ಯಕ್ತಿಗಳ ಮೇಲೆ ತೀವ್ರ ನಿಗಾ ವಹಿಸಲಾಗಿದ್ದು, ವಿಮಾನ ನಿಲ್ದಾಣದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್ ಗಳನ್ನು ಸ್ಥಾಪಿಸಲಾಗಿದ್ದು, ಸರ್ಜಿಕಲ್ ಮಾಸ್ಕ್, ಔಷಧಗಳಿಗೆ ರಾಜ್ಯದಲ್ಲಿ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದರು.
ಸರ್ಜಿಕಲ್ ಮಾಸ್ಕ್ ಅನ್ನು ಹೆಚ್ಚಿನ ದರಕ್ಕೆ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಸಿಎಂ, ಪ್ರತಿ ದಿನ ಮಾಧ್ಯಮಗಳ ಮೂಲಕ ಕೊರೋನಾ ಕುರಿತ ಯಾವುದೇ ಮಾಹಿತಿಯನ್ನು ಮುಚ್ಚಿಡದೆ ಹಂಚಿಕೊಳ್ಳುತ್ತೇನೆ. ಜನರು ಆತಂಕ ಪಡುವ ಅಗತ್ಯವಿಲ್ಲ, ಆದರೆ ಎಚ್ಚರ ವಹಿಸಿ ಎಂದು ಮನವಿ ಮಾಡಿದರು.
ಬಿಜೆಪಿಯಲ್ಲಿ ಬಿರುಕು: ಅತೃಪ್ತ ನಾಯಕರ ‘ಬಣ’ ಕದನ
ಕರ್ನಾಟಕದ ಬಿಜೆಪಿ ಘಟಕದಲ್ಲಿ ಬಣ ರಾಜಕೀಯ ಮತ್ತೆ ಮುಂದುವರೆದಿದೆ. ಪಕ್ಷದೊಳಗಿನ ಅತೃಪ್ತ ನಾಯಕರು ಮಾಜಿ ಸಚಿವ ಕುಮಾರ್ ಬಂಗಾರಪ್ಪನವರ ನಿವಾಸದಲ್ಲಿ ಸಭೆ ಸೇರಿದ್ದು, ಈ ಸಭೆ ಹಲವು...