ಮೈಸೂರು : ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ ಭೇಟಿ ನೀಡಿದ್ದು, ಸಮೀಕ್ಷೆಯನ್ನಾಧರಿಸಿ ಕೇಂದ್ರ ಸರ್ಕಾರ ಪರಿಹಾರ ನೀಡಲಿದೆ ಎಂದು ಸಚಿವ ಬಿ.ಸಿ ಪಾಟೀಲ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾದ ಕೃಷಿ ಮತ್ತು ತೋಟಗಾರಿಕಾ ಬೆಳೆ ನಷ್ಟದ ಬಗ್ಗೆ ವೈಮಾನಿಕ ಸಮೀಕ್ಷೆ ನಡೆಸುತ್ತಿದೆ. ಮೂರು ದಿನಗಳ ಕಾಲ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ ನೀಡಲಿದೆ. ಅಧ್ಯಯನ ತಂಡದ ಸಮೀಕ್ಷೆಯನ್ನಾಧರಿಸಿ ಕೇಂದ್ರ ಪರಿಹಾರ ನೀಡಲಿದೆ ಎಂದರು.
ರಸಗೊಬ್ಬರವಾಗಲೀ ಬಿತ್ತನೆ ಬೀಜವಾಗಲೀ ಕಳ್ಳದಾಸ್ತಾನು, ಕಳ್ಳಸಾಗಾಣಿಕೆ ಮಾಡಲು ಬಿಡುವುದಿಲ್ಲ. ಪಿರಿಯಾಪಟ್ಟಣದಲ್ಲಿ ಈಗಾಗಲೇ ಒಬ್ಬರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಕೃಷಿ ಅಧಿಕಾರಿಗಳು ಬರೀ ಕಚೇರಿಯಲ್ಲಷ್ಟೇ ಕೂರಬಾರದು. ಸಮಸ್ಯೆ ಇರುವ ರೈತರ ಹೊಲಗಳಿಗೆ ಭೇಟಿ ನೀಡಬೇಕು. ಅಲ್ಲದೇ ಕೃಷಿ ವಿಶ್ವವಿದ್ಯಾಲಯದ ಪ್ರೊಫೆಸರ್ ಗಳು ಸಹ ಕ್ಯಾಂಪಸ್ ಬಿಟ್ಟು ರೈತರ ಹೊಲಗಳಿಗೆ ಭೇಟಿ ನೀಡಬೇಕು ಎಂದು ತಿಳಿಸಿದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.