ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಮನಗರದ ಜಾನಪದ ಲೋಕದಲ್ಲಿ ಆಯೋಜಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರ ಮದುವೆ ಶಿಫ್ಟ್ ಆಗುವ ಸಾಧ್ಯತೆ ಇದೆ.
ರಾಮನಗರದಲ್ಲಿ ನಡೆಯಬೇಕಿದ್ದ ಮದುವೆಯನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ಹೆಚ್ ಡಿ ಕುಮಾರಸ್ವಾಮಿ ಕುಟುಂಬ ತೀರ್ಮಾನಿಸಿದೆ ಎನ್ನಲಾಗಿದೆ.
ನಿಖಿಲ್ ವಿವಾಹಕ್ಕೆ ರಾಮನಗರದ ಸುಮಾರು 60 ಎಕರೆ ಜಮೀನಿನಲ್ಲಿ ಈಗಾಗಲೇ ಸಿದ್ಧತೆ ನಡೆದಿತ್ತು. ಜಾನಪದ ಲೋಕದ ಜಮೀನಿನಲ್ಲಿ ಈಗಾಗಲೇ 6 ಕೊಳವೆಬಾವಿ ಕೊರೆಸಲಾಗಿತ್ತು. ಆದರೆ ಕೊರೊನಾ ಭೀತಿಯಿಂದ ಸ್ಥಳ ಬದಲಾವಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ. ದೇವೇಗೌಡ ಅವರೊಂದಿಗೆ ಕುಮಾರಸ್ವಾಮಿ ಅವರು ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರಂತೆ. ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನಷ್ಟೆ ಹೊರಬೀಳಬೇಕಿದೆ.








