ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ನಟ ಮಣಿಗಳಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿಯನ್ನು ಕೆ.ಸಿ ಜನರಲ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಬರಲಾಗಿದೆ.
ಸಿಸಿಬಿ ಮೂಲಗಳ ಪ್ರಕಾರ ರಾಗಿಣಿ ಹಾಗೂ ಸಂಜನಾಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಡೋಪಿಂಗ್ ಟೆಸ್ಟ್(ಮಾದಕ ವಸ್ತು ಸೇವನೆ ಹಿನ್ನೆಲೆ) ನಡೆಸಲಾಗುತ್ತಿದೆ ಎನ್ನಲಾಗಿದೆ. ಇಬ್ಬರೂ ನಟಿಯರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎಂದು ಇತರೆ ಆರೋಪಿಗಳು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರಾಗಿಣಿ ಹಾಗೂ ಸಂಜನಾ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರಾ ಇಲ್ಲಾ ಎನ್ನುವುದರ ಬಗ್ಗೆ ಇಬ್ಬರ ಕೂದಲಿನ ಮಾದರಿ ಪಡೆದುಕೊಂಡು ಡೋಪಿಂಗ್ ಟೆಸ್ಟ್ ಮಾಡಲು ಚಿಂಚನೆ ನಡೆಸಲಾಗಿದೆ. ಡ್ರಗ್ಸ್ ಸೇವಿಸಿ 6 ತಿಂಗಳವರೆಗೂ ವ್ಯಕ್ತಿಯ ದೇಹದಲ್ಲಿ ಡ್ರಗ್ಸ್ ಅಂಶ ಇರುತ್ತದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಡೋಪಿಂಗ್ ಟೆಸ್ಟ್ ಮಾಡಿಸಲಾಗುತ್ತಿದೆ ಎನ್ನಲಾಗಿದೆ.
ಸಾಮಾನ್ಯವಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಡೋಪಿಂಗ್ ಟೆಸ್ಟ್ ಮಾಡಿಸಲಾಗುತ್ತದೆ. ಅದೇ ರೀತಿ ಇವರಿಗೂ ಡ್ರಗ್ ಟೆಸ್ಟ್ ಮಾಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇದೇ ವೇಳೆ, ನಟಿ ಸಂಜನಾ ಗಲ್ರಾನಿ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಆಗಿದೆ ಎನ್ನಲಾಗಿದೆ. ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಬರುವಾಗಲೂ ಪೊಲೀಸ್ ವಾಹನದಲ್ಲಿ ಸಂಜನಾ ಮಲಗಿಕೊಂಡೇ ಬಂದಿದ್ದಾರೆ. ಆದರೆ, ರಾಗಿಣಿ ಎಂದಿನಂತೆ ಲವಲವಿಕೆಯಿಂದ ಇದ್ದಾರೆ ಎನ್ನಲಾಗಿದೆ. ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ರಾಗಿಣಿ ಹಾಗೂ ಸಂಜನಾರನ್ನು ಮಡಿವಾಳದ ಎಫ್‍ಎಸ್‍ಎಲ್ ಕೇಂದ್ರದಲ್ಲಿ ವಿಚಾರಣೆ ಮಾಡಲಾಗುತ್ತದೆ ಎನ್ನಲಾಗಿದೆ.
ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ
ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...








