ಬೆಂಗಳೂರು : ಹಿಂದೂಗಳೆಲ್ಲಾ ಒಳ್ಳೆಯವರಲ್ಲ, ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಎಲ್ಲಾ ಜಾತಿ ಧರ್ಮಗಳಲ್ಲೂ ಒಳ್ಳೆಯವರು ಇರುತ್ತಾರೆ. ಕೆಟ್ಟವರು ಇರುತ್ತಾರೆ. ದೇವರು ಇದ್ದಾನೆ ಅಂದ್ರೆ ಅಲ್ಲಿ ದೆವ್ವ -ಸೈತಾನ್‍ಗಳು ಇದ್ದೇ ಇರುತ್ತವೆ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.
ನಗರದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡ್ ನಲ್ಲಿ ಈದ್ಗಾ ಮೈದಾನ ಕಾಂಪೌಂಡ್ ಪೂಜೆ ನೆರವೇರಿಸಿ ಮಾತನಾಡಿದ ಸೋಮಣ್ಣ, ಈ ಕೆಲಸಕ್ಕೂ ಜಾತಿ ಧರ್ಮಕ್ಕೂ ಸಂಬಂಧವಿಲ್ಲ. ಇದು ನನ್ನ ಕರ್ತವ್ಯ. ಒಬ್ಬ ಜನಪ್ರತಿನಿಯಾಗಿ ನಾನು ನನ್ನ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದೇನೆ. ನಾವು ಭಾರತೀಯರು, ಹಿಂದೂ-ಮುಸ್ಲಿಮರು ಒಂದೇ ಮನೆಯವರು. ನೀವೂ ಅಲ್ಲಾ ಅಂತೀರಾ ನಾವು ಶಿವ ಅಂತೀವಿ, ಎಲ್ಲರಿಗೂ ದೇವರೊಬ್ಬನೇ ಎಂದರು.
ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಸೋಮಣ್ಣ, ಕೊರೊನಾದಿಂದಾಗಿ ಸಾಮಾನ್ಯ ಬಡವ ಕಳೆದ ಐದು ತಿಂಗಳಿನಿಂದ ಕಂಗಾಲಾಗಿದ್ದಾನೆ. ಕಾಂಗ್ರೆಸ್ ನವರು 75 ವರ್ಷಗಳಿಂದ ನಿಮ್ಮನ್ನ ವೋಟ್ ಬ್ಯಾಂಕ್ ಗಾಗಿ ಬಳಸಿಕೊಂಡಿದ್ದಾರೆ, ಬಳಸಿಕೊಳ್ಳುತ್ತಿದ್ದಾರೆ. ಇನ್ನು ಎಷ್ಟು ವರ್ಷ ನೀವು ಮೋಸ ಹೋಗ್ತೀರಾ..?. ನಾನು ಯಾವತ್ತಾದರೂ ಅನ್ಯಾಯ ಮಾಡಿದ್ದೀನಾ..? ಆದರೂ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ನನಗೆ ಬೂಟಾಟಿಕೆ ಗೊತ್ತಿಲ್ಲ, ನಾನು ಕಾಮ್ ಕರ್ನೆ ವಾಲಾ ( ಜನರ ಕೆಲಸ ಮಾಡುವವನು) ಎಂದು ಹೇಳಿದರು.
ಇನ್ನಾದರೂ ನೀವು ಬದಲಾಗಿ, ದೇಶದಲ್ಲಿ ನರೇಂದ್ರ ಮೋದಿ ಅವರು ಬದಲಾವಣೆಯ ಪರ್ವ ಶುರು ಮಾಡಿದ್ದಾರೆ. ನಿಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ. ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವಂತೆ ಮಾಡಿ ಎಂದ ಸೋಮಣ್ಣ ಅವರು, ಅಭಿವೃದ್ಧಿಗಾಗಿ ನೀವು ನಮ್ಮನ್ನ ಬೆಂಬಲಿಸಿ ಎಂದು ಮನವಿ ಮಾಡಿಕೊಂಡರು. ನಾನು ಈ ಪ್ರದೇಶದ ಬಡವರಿಗಾಗಿ 1 ಸಾವಿರ ಮನೆಗಳನ್ನು ಕಟ್ಟಿಕೊಡುತ್ತಿದ್ದೇನೆ. ನನ್ನ ಬೆಂಬಲಿಸದಿದ್ದರೂ ಪರವಾಗಿಲ್ಲ. ಆದ್ರೆ ನನ್ನ ವಿರುದ್ಧ ಸುಮ್ಮನೆ ಅಪಪ್ರಚಾರ ಮಾಡಬೇಡಿ. ನಾನು ಬಸವ ತತ್ವದಲ್ಲಿ ನಂಬಿಕೆಯನ್ನಿಟ್ಟುಕೊಂಡು ಅದರಂತೆ ನಡೆಯುತ್ತಿರುವ ವ್ಯಕ್ತಿ. ಅದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನೀವು ಬೆಂಬಲಿಸದಿದ್ದರೂ ನಾನು ನಿಮ್ಮ ಸೇವೆ ಮಾಡುತ್ತೇನೆ. ಈ ಈದ್ಗಾ ಮೈದಾನವನ್ನು ಆರು ತಿಂಗಳಿನಲ್ಲಿ ಕಟ್ಟಿಕೊಡುತ್ತೇನೆ ಎಂದು ಭರವಸೆ ನೀಡಿದರು.
ಈ ಕಾರ್ಯಕ್ರಮಕ್ಕೆ ನಾನು ಜಮೀರ್ ನ ಕರೆದುಕೊಂಡು ಬರಬೇಕು ಎಂದುಕೊಂಡಿದ್ದೆ. ಆದ್ರೆ ಅವನು ಬರಲಿಲ್ಲ. ಅವನ ನನ್ನ ಆತ್ಮೀಯ, ಅವನು ದಡ್ಡ ಅಲ್ಲ, ಕಿಲಾಡಿ. ಜಮೀರ್ ಕೇವಲ ಮುಸಲ್ಮಾರ ಎಂಎಲ್ ಎ ಅಲ್ಲ, ಎಲ್ಲಾ ವರ್ಗದವರ ಎಂಎಲ್ ಎ ಎಂದು ಹೇಳಿದರು.
ನಿಮಗೆ ನೂರು ಕೋಟಿ ರೂಪಾಯಿ ಕೆಲಸ ಇದ್ದರೂ ಪರವಾಗಿಲ್ಲ ನಾನು ಮಾಡಿಕೊಡುತ್ತೇನೆ. ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ಕೊಟ್ಟಿಕೊಡುತ್ತಿದ್ದೇನೆ. ಈ ವರೆಗೂ ಯಾರು ಚಾಲೆಂಜ್ ಹಾಕಿಲ್ಲ, ಜೂನ್ ಒಳಗೆ ಮನೆ ಕಟ್ಟಿಕೊಡುತ್ತೇನೆ. ಇದು ಆಗಿಲ್ಲ ಎಂದ್ರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದು ನಾನು ಮಾತ್ರ. ನಾನು ಕೆಲಸ ಮಾಡಿ ತೋರಿಸುತ್ತೇನೆ. ಯಾಕೆ ಈ ಹಿಂದೆ ಇದ್ದವರು ಮಾಡಲ್ಲಿಲ್ಲ..? ಎಂದು ಪ್ರಶ್ನಿಸಿದರು.
ನಾವ್ಯಾರು ನಿಮ್ಮ ಶತ್ರುಗಳಲ್ಲ, ನಾವು ಯಾರಿಗೂ ಅನ್ಯಾಯ ಮಾಡುವವರಲ್ಲ. ಇನ್ನೂ ಎರಡು ಮುಕ್ಕಾಲು ವರ್ಷ ನನಗೆ ಅಧಿಕಾರ ಇದೆ. ಅದನ್ನು ನೀವು ಉಪಯೋಗಿಸಿಕೊಳ್ಳಿ ಎಂದ ಸೋಮಣ್ಣ, ನನಗೆ ಬೆಂಬಲಿಸದಿದ್ದರೂ ಪರವಾಗಿಲ್ಲ, ಆದ್ರೆ ಅಪಪ್ರಚಾರ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.
ಕೆಲಸ ಮಾಡುವವರಿಗೆ ಅವಕಾಶ ಮಾಡಿಕೊಡಿ. ನಿಮ್ಮಲ್ಲಿರುವ ಬಡವರ ಲೀಸ್ಟ್ ಕೊಡಿ, ಅವರಿಗೆ ಮನೆ ಕೊಟ್ಟಿಕೊಡಲು ಮೂರುವರೆ ಲಕ್ಷ ರೂಪಾಯಿ ದುಡ್ಡು ಕೊಡುತ್ತೇವೆ ಎಂದು ಭರವಸೆ ನೀಡಿದರು. ಕಾರ್ಯಕ್ರಮದಲ್ಲಿ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.
ಇದಕ್ಕೂ ಮೊದಲು ಸಚಿವರು, ನಾಯಂಡ ಹಳ್ಳಿ ವಾರ್ಡ್ ಸಂಖ್ಯೆ – 131ರಲ್ಲಿ ಕಳೆದ 15 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಅಂಡರ್ ಪಾಸ್ ಅನ್ನು ಅಭಿವೃದ್ದಿ ಪಡಿಸಿ ಲೋಕಾರ್ಪಣೆ ಮಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ಧಿಯೇ ನನ್ನ ಧ್ಯೇಯ, ತಾಂತ್ರಿಕವಾಗಿ ಸರ್ವೆ ಮಾಡಿಸಿ ಯಾರಿಗೂ ತೊಂದರೆ ಆಗದಂತೆ ಈ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಜನರ ಪ್ರತಿನಿಧಿಗಳು ಚುನಾವಣೆ ವೇಳೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆನ್ನುವುದು ನನ್ನ ಸಂಕಲ್ಪವಾಗಿದೆ. ಈ ಅಂಡರ್ ಪಾಸ್ ಯೋಜನೆಯನ್ನು ಸುಮಾರು 8.30 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಇದೇ ವೇಳೆ ಮೂಡಲಪಾಳ್ಯದಲ್ಲಿರುವ ಭೈರವೇಶ್ವರ ನಗರದ ಬಿಬಿಎಂಪಿ ಕಾಲೇಜ್‍ನ ರಿನೋವೇಷನ್ ಪೂಜೆ ಮಾಡಿದರು.
ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯರಾದ ಸವಿತಾ ವಿ. ಕೃಷ್ಣ, ಮೋಹನ್ ಕುಮಾರ್ ಸೇರಿದಂತೆ ಸ್ಥಳೀಯ ಬಿಬಿಎಂಪಿ ಸದಸ್ಯರು, ಬಿಬಿಎಂಪಿ ಅಧಿಕಾರಿಗಳು ಉಪಸ್ಥಿತರಿಸಿದ್ದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.








