ಕಳೆದ ಹಲವು ದಿನಗಳಿಂದ ಕೊಂಚ ಕಡಿಮೆಯಾಗಿದ್ದ ಮಳೆ ಕಳೆದ 2 ದಿನಗಳಿಂದ ಮತ್ತೆ ವೇಗ ಪಡೆದುಕೊಂಡಿದೆ. ಇದೀಗ ಮುಂದಿನ ಐದು ದಿನಗಳಲ್ಲಿ ದಕ್ಷಿಣ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು-ಐದು ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇನ್ನೂ ಸೆಪ್ಟೆಂಬರ್ 12ರಿಂದ ಒಡಿಶಾ, ಕರಾವಳಿ ಆಂಧ್ರ ಪ್ರದೇಶ, ಯಾನಮ್, ತೆಲಂಗಾಣ, ವಿದರ್ಭದಲ್ಲಿಯೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಮತ್ತೊಂದು ಆಘಾತಕಾರಿ ಮಾಹಿತಿ ನಿಡಿರುವ IMD ಕರ್ನಾಟಕ ಕರಾವಳಿಯ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪ್ರಭಾವ ಬೀರಲಿದೆ ಎಂದು ತಿಳಿಸಿದೆ. ಗಂಗೆಟಿಕ್ ಪಶ್ಚಿಮ ಬಂಗಾಳ ಮತ್ತು ನೆರೆಹೊರೆಯ ಭಾಗಗಳ ಮೇಲೆ ಚಂಡಮಾರುತದ ಪ್ರಭಾವವಿರಲಿದೆ ಇನ್ನಲಾಗಿದೆ.








