ಮೈಸೂರು: ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಶಾಸಕ ಜಮೀರ್ ಅಹಮದ್‍ರನ್ನು ಇನ್ನೂ ಯಾಕೆ ಅರೆಸ್ಟ್ ಮಾಡಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಪ್ರಶಾಂತ್ ಸಂಬರಗಿ ನೇರವಾಗಿ ಹೆಸರಿಸಿರುವ ಜಮೀರ್ ಅಹಮದ್ ಬಂಧಿಸಿ ವಿಚಾರಣೆ ನಡೆಸುತ್ತಿಲ್ಲವೇಕೆ. ಇದರ ಹಿಂದಿನ ಉದ್ದೇಶ ಏನು ? ತನಿಖಾಧಿಕಾರಿಗಳಿಗೆ ಪ್ರಶಾಂತ್ ಸಂಬರಗಿ ಆರೋಪಗಳ ಬಗ್ಗೆ ಅನುಮಾನಗಳಿದ್ದರೆ ಅವರನ್ನೂ ತನಿಖೆಗೆ ಒಳಪಡಿಸಲಿ. ಸಂಬರಗಿ ಮಾಡಿರುವ ಅರೋಪಗಳ ಬಗ್ಗೆ ಪೂರಕ ದಾಖಲೆಗಳಿದ್ದ ಸಂಗ್ರಹಿಸಿಕೊಂಡು ತನಿಖೆ ಮುಂದುವರೆಸಲಿ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಯಾರೋ ಒಂದಿಬ್ಬರು ಸಿನಿಮಾ ನಟಿಯರನ್ನು ಕೂಡಿ ಹಾಕಿ ವಿಚಾರಣೆ ನಡೆಸಿ ಕಳಿಸಿದರೆ ಸಾಕಾಗುವುದಿಲ್ಲ. ಈ ಪ್ರಕರಣ ಹೊರ ಬಂದಿದ್ದೇ ಇಂದ್ರಜಿತ್ ಲಂಕೇಶ್ ಅರ ಧೈರ್ಯದ ನಿರ್ಧಾರದಿಂದ. ಹೀಗಾಗಿ ಅವರು ಹೇಳಿದ ಎಲ್ಲ ವಿಚಾರಗಳ ಬಗ್ಗೆ ವಿವಿಧ ಆಂಗಲ್‍ಗಳಿಂದ ತನಿಖೆಯಾಗಬೇಕು ಎಂದು ಸಂಸದರು ಆಗ್ರಹಿಸಿದ್ದಾರೆ.
ಡ್ರಗ್ಸ್ ವಿಚಾರದಲ್ಲಿ ಆರೋಪಿಗಳ ರಕ್ಷಣೆ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಇರುವುದು ನಿಜ ಎಂದು ಪುನರುಚ್ಛರಿಸಿದ ಪ್ರತಾಪ್‍ಸಿಂಹ, ಇಂತಹ ಪ್ರಕರಣಗಳಲ್ಲಿ ರಾಜಕೀಯ ಬೆರೆಯುವುದು ಸಾಮಾನ್ಯ. ಗೃಹ ಸಚಿವರು ಯಾವುದೇ ಒತ್ತಡಕ್ಕೆ ಮಣಿಯಲ್ಲ ಎಂದಿದ್ದಾರೆ. ಅವರ ಮಾತಿನ ಮೇಲೆ ನಂಬಿಕೆ ಇದೆ ಎಂದಿದ್ದಾರೆ.
ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ
ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...








