ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನಾಲ್ಕೈದು ದಿನಗಳಲ್ಲಿ ದೆಹಲಿಗೆ ತೆರಳಲಿದ್ದಾರೆ.
ಸಂಪುಟ ವಿಸ್ತರಣೆ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಚಿವ ಸಂಪುಟ ವಿಸ್ತರಣೆ ಬಾಕಿ ಇದೆ. ಈ ಸಂಬಂಧ ವರಿಷ್ಠರ ಜೊತೆ ಚರ್ಚೆ ನಡೆಸಲಾಗುತ್ತದೆ. ಇನ್ನೂ ಮೂರು ನಾಲ್ಕು ದಿನದಲ್ಲಿ ನವದೆಹಲಿಗೆ ತೆರಳಲು ಚಿಂತನೆ ನಡೆಸಿದ್ದು, ಅನುಮತಿ ಸಿಗುತ್ತಿದ್ದಂತೆ ದೆಹಲಿಗೆ ತೆರಳುತ್ತೇನೆ ಎಂದು ತಿಳಿಸಿದ್ದಾರೆ.
ಸದ್ಯ ಸಂಪುಟದಲ್ಲಿ ಆರು ಸ್ಥಾನಗಳು ಖಾಲಿ ಉಳಿದಿದ್ದು, ಪರಿಷತ್ ಸ್ಥಾನಕ್ಕೆ ಆಯ್ಕೆಯಾಗಿರುವ ಎಂಟಿಬಿ ನಾಗರಾಜ್, ಆರ್.ಶಂಕರ್, ಹೆಚ್.ವಿಶ್ವನಾಥ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.








