ಲೋಕೋಪಯೋಗಿ ಇಲಾಖೆಯಲ್ಲಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಹೊಸದಿಲ್ಲಿ, ಸೆಪ್ಟೆಂಬರ್11: ಲೋಕೋಪಯೋಗಿ ಇಲಾಖೆಯಲ್ಲಿ ತಾಂತ್ರಿಕೇತರ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 523 ಗ್ರೂಪ್ ‘ಸಿ’ ವೃಂದದ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಲೋಕೋಪಯೋಗಿ ಇಲಾಖೆ ಸೆಪ್ಟೆಂಬರ್ 19,2020ರ ಮೊದಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು ಎಂದು ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
ಹಿಂದುಳಿದ ವರ್ಗಗಳಿಗೆ ಗರಿಷ್ಠ 38 ಮತ್ತು ಪ.ಜಾ/ಪ.ಪಂ/ಪ್ರವರ್ಗ-1ರ ವರ್ಗಗಳಿಗೆ ಗರಿಷ್ಠ 40 ವಯೋಮಿತಿ ನಿಗದಿ ಪಡಿಸಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 19, 2020.
ಅರ್ಜಿ ಸಲ್ಲಿಸುವುದು ಹೇಗೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಿ.
ಅಲ್ಲಿ ನೀಡಲಾಗಿರುವ ಅಧಿಸೂಚನೆಯಂತೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 19,2020
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 21,2020
ಹೆಚ್ಚಿನ ಮಾಹಿತಿಗಾಗಿ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ http://www.kpsc.kar.nic.in/ ಸಂಪರ್ಕಿಸಿ.








