ಬೆಂಗಳೂರು: ಕಾಂಗ್ರೆಸ್ ಪಕ್ಷವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಪಕ್ಷಕ್ಕೆ ನಾಯಕರು ಬಂದು ಹೋಗಬಹುದು, ಅದರಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಪ್ರದೇಶದ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯ ಪ್ರದೇಶದಿಂದ ಬೆಂಗಳೂರಿಗೆ ಬಂದಿರುವ ಶಾಸಕರು ಯಾರೂ ತಮ್ಮ ಸದಸ್ಯತ್ವವನ್ನು ಕಳೆದುಕೊಳ್ಳುವ ಮನಸ್ಥಿತಿಯಲ್ಲಿಲ್ಲ. ತಮ್ಮ ಮುಂದಿನ ರಾಜಕೀಯ ಕಠಿಣತೆಯನ್ನು ಈ ಶಾಸಕರು ಅರ್ಥ ಮಾಡಿಕೊಂಡು ವಾಪಸ್ಸು ಹೋಗಿ ಸರ್ಕಾರವನ್ನು ಉಳಿಸಲಿದ್ದಾರೆ ಎಂಬ ನಂಬಿಕೆಯಿದೆ ಎಂದರು.
ಧ್ವನಿ ಎತ್ತದಿದ್ದರೆ ಮೂಲೆಗೆ ಕೂರಿಸ್ತಾರೆ: ಡಿಕೆಶಿ ಸಂಪುಟದಲ್ಲಿ ಮಹಿಳೆಯರ ನಿರ್ಲಕ್ಷ್ಯಕ್ಕೆ ಮಾಜಿ ಸಚಿವೆ ಮೋಟಮ್ಮ ಆಕ್ರೋಶ
ಮೂಡಿಗೆರೆ: ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡದ ವಿಚಾರವಾಗಿ ಹಿರಿಯ ಕಾಂಗ್ರೆಸ್ ನಾಯಕಿ ಹಾಗೂ ಮಾಜಿ ಸಚಿವೆ ಮೋಟಮ್ಮ ಅವರು ಮುಖ್ಯಮಂತ್ರಿ ಡಿ.ಕೆ....








