“ಹೆಬ್ಬುಲಿ” ಹೆಗಲಿಗೆ ರಾಜ್ಯ ಕಾಂಗ್ರೆಸ್ ಸಾರಥ್ಯ”
ಶಾಸಕಾಂಗ ಪಕ್ಷದ ನಾಯಕನಾಗಿ ಸಿದ್ದು ಮುಂದುವರಿಕೆ
ಬೆಂಗಳೂರು: ಬಹಳಷ್ಟು ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿ ಇಂದು ಆದೇಶ ಹೊರಡಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿ ಹಾಗೂ ಶಾಸಕಾಂಗ ಪಕ್ಷದ ನಾಯಕನಾಗಿ ಮುಂದುವರೆಯಲಿದ್ದಾರೆ.
ಮೂವರು ಕಾರ್ಯಾಧ್ಯಕ್ಷರಾಗಿ ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ ಹಾಗೂ ಸಲೀಂ ಅಹ್ಮದ್ ಅವರನ್ನು ನೇಮಕ ಮಾಡಲಾಗಿದೆ.








