ಕೊಪ್ಪಳ : ರೈತ ಕುಟುಂಬದಿಂದ ಬಂದಂತಹ ತಾವು ರೈತರಿಗಾಗಿ ಹೋರಾಟ ಮಾಡಿರುವ ತಮಗೆ ರೈತರ ಕಷ್ಟನಷ್ಟಗಳ ಅರಿವಿದೆ.ರೈತರಿಗಾಗಿ ತಾವು ಜೈಲಿಗೂ ಸಹ ಹೋಗಿಬಂದಿದ್ದು, ಇದನ್ನು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಚೆನ್ನಾಗಿ ಅರಿತುಕೊಳ್ಳಬೇಕೆಂದು ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಭೂಸುಧಾರಣೆ ಕಾಯಿದೆ ತಿದ್ದುಪಡಿಯಿಂದ ಯಾರಿಗೂ ನಷ್ಟವಾಗಿಲ್ಲ. ಮೆಡಿಕಲ್ ಓದಿದವರು ಸರ್ಕಾರಿ ನೌಕರಿ ಸಿಗದಿದ್ದಾಗ ಆಸ್ಪತ್ರೆ ಕ್ಲಿನಿಕ್ ತೆರೆಯಲು ಅವಕಾಶವಿದೆ. ಅದರಂತೆ ಕೃಷಿಕರ ಮಕ್ಕಳಲ್ಲದವರು ಕೃಷಿಪದವಿ ಪಡೆದು ಭೂಮಿ ಖರೀದಿಸಿ ಕೃಷಿ ಮಾಡಲು ಕಾಯಿದೆ ಅನುಕೂಲ ಕಲ್ಪಿಸಿದೆ. ಕಾಯಿದೆ ತಿದ್ದುಪಡಿಯಿಂದ ಯಾರಾದರೂ ಸಹ ಕೃಷಿಕರಾಗಬಹುದು. ಕೃಷಿಯತ್ತ ಆಕರ್ಷಣೆ ಹೆಚ್ಚಾಗಿ ಕೃಷಿಕ್ಷೇತ್ರ ಅಭಿವೃದ್ಧಿಯಾಗಲು ಸಹಕಾರಿಯಾಗಲಿದೆ ಎಂದು ಸ್ಪಷ್ಟಪಡಿಸಿದರು.
ಕೋವಿಡ್ ಕಾರಣ ಐಸಿಎಆರ್ (ಭಾರತೀಯ ಕೃಷಿ ಸಂಶೋಧನಾ ಮಂಡಳಿ) ನಿಯಮದಂತೆ, ರಾಜ್ಯದಲ್ಲಿ ಕೃಷಿ ಪದವಿಯ ದಾಖಲಾತಿಗೆ ಪರೀಕ್ಷೆಯ ಬದಲಾಗಿ ಸಿಇಟಿ ರ್‍ಯಾಂಕಿಂಗ್ ಆಧಾರದ ಮೇಲೆ ಕೃಷಿಕರ ಮಕ್ಕಳು ಹಾಗೂ ಕೃಷಿ ಕಾರ್ಮಿಕರ ಕೋಟಾದಡಿ ಅರ್ಹ ವಿದ್ಯಾರ್ಥಿಗಳಿಗೆ ಸೀಟು ಹಂಚಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯಲ್ಲಿ ಸರ್ಕಾರವು ರೈತರ ಆರೋಗ್ಯ ಹಾಗೂ ಹಿತರಕ್ಷಣೆಗೆ ಹೆಚ್ಚಿನ ಮಹತ್ವ ನೀಡಿದ್ದು, ಸಾವಿರಾರು ವಿದ್ಯಾರ್ಥಿಗಳು ಪ್ರಾಯೋಗಿಕ ಪರೀಕ್ಷೆಗಳಿಗೆ ಸ್ವತಃ ಹಾಜರಾಗಬೇಕಾಗುತ್ತದೆ. ಈ ಸಂದರ್ಭದಲ್ಲಿ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ನಡೆಸುವುದು ಕಷ್ಟ ಸಾಧ್ಯ. ಆದ್ದರಿಂದ ಕೃಷಿ ಪದವಿಯ ದಾಖಲಾತಿಗೆ ನಡೆಸಲಾಗುವ ಪ್ರಾಯೋಗಿಕ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ. ಕೃಷಿಕರ ಕೋಟಾದ ಅಡಿಯಲ್ಲಿ 40% ಸೀಟುಗಳು ಕೃಷಿಕರ ಮಕ್ಕಳಿಗೇ ಮೀಸಲಾಗಿದೆ. ಕೃಷಿಕರ ಮಕ್ಕಳಿಗೆ ಯಾವುದೇ ರೀತಿಯ ಅನ್ಯಾಯವಾಗುವುದಿಲ್ಲ ಎಂದು ಸಚಿವರು ಖಾತ್ರಿಪಡಿಸಿದರು.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









