ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿ ಮತ್ತು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಗೆ ಕೊರೊನಾ ಸೋಂಕಿರುವುದು ದೃಢವಾಗಿದೆ. ಈ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ವಿಶ್ವನಾಥ್ ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. ವಿಶ್ವನಾಥ್ ಟ್ವೀಟ್ ನಲ್ಲಿ “ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಬರೆದುಕೊಂಡಿದ್ದಾರೆ.
ವಿಶ್ವನಾಥ್ ಅವರು ಕಳೆದೆರಡು ದಿನದ ಹಿಂದೆ ಯಲಹಂಕ ಮೇಲ್ಸೇತುವೆ ಉದ್ಘಾಟನೆ ವೇಳೆ ಸಿಎಂ ಯಡಿಯೂರಪ್ಪ ಜೊತೆಯೂ ಭಾಗಿಯಾಗಿದ್ದರು.








