ಮೈಸೂರು : ಡ್ರಗ್ಸ್ ದಂಧೆಕೋರರೇ ಮೈತ್ರಿ ಸರ್ಕಾರವನ್ನು ಬೀಳಿಸಿದರು ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಟಾಂಗ್ ನೀಡಿದ್ದ ಡಿಸಿಎಂ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.
ಸಾ.ರಾ ಮಹೇಶ್ ಟ್ವೀಟ್ ನಲ್ಲಿ, “ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎ???ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲ್ಯೂ ಫಿಲಂ ಆದರೂ… ಎಂದು ಟಾಂಗ್ ನೀಡಿದ್ದಾರೆ.
ಡ್ರಗ್ಸ್ ದಂಧೆಕೋರರು ಸರ್ಕಾರ ಬೀಳಿಸಿದರು ಎಂದು ಈ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಕುರಿತು ಲಕ್ಷ್ಮಣ್ ಅವದಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದ ಎಂದಿದ್ದರು. ಇದೀಗ ಟ್ವೀಟ್ ಮೂಲಕ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.
https://www.youtube.com/watch?v=I5BRabD3f5A








