ಮುಂಬೈ : ಟೀಂ ಇಂಡಿಯಾದ ಯುವ ಆಟಗಾರ ಹಾಗೂ ಬಾಲಿವುಡ್ ಯುವ ನಟಿ ಪ್ರಾಚಿಸಿಂಗ್ ಮಧ್ಯೆ ಸಂಥಿಂಗ್ ಸಂಥಿಂಗ್ ನಡೆಯುತ್ತಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಐಪಿಎಲ್ 2020ರ ಆವೃತ್ತಿಯ ಹಿನ್ನೆಲೆಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರಂಭಿಕ ಆಟಗಾರ ಪೃಥ್ವಿ ಶಾ ಯುಎಇಗೆ ತೆರಳಿದ್ದಾರೆ. ಇತ್ತೀಚೆಗೆ ಯುಎಇನಲ್ಲಿ ತಂಡದ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಪೃಥ್ವಿ ಶಾ ಇನ್ ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಇದಕ್ಕೆ ನಟಿ ಪ್ರಾಚಿ ಸಿಂಗ್ ‘ವ್ಹಾ ವ್ಹಾ ಐ ಮಿಸ್ ಡಟ್ ಲಾಫ್’ `ಕ್ಯೂಟಿ’ ಎಂದು ಲವ್ ಇಮೋಜಿ ಕಾಮೆಂಟ್ ಮಾಡಿದ್ದಾರೆ. ಅಲ್ಲದೇ ಪೃಥ್ವಿ ಶಾ ಪೋಸ್ಟ್ ಮಾಡುವ ಪ್ರತಿಯೊಂದು ಪೋಸ್ಟ್ ಗೂ ಪ್ರಾಚಿ ಸಿಂಗ್ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಹೀಗಾಗಿ ಈ ಇಬ್ಬರ ನಡುವೇ ಪ್ರೀತಿ ಮೂಡಿದೆಯಾ ಎಂಬ ಅನುಮಾನಕ್ಕೆ ಕಾರಣವಾಗಿದೆ. ಇಬ್ಬರು ನಡುವೆ ಸಂಥಿಂಗ್ ಸಂಥಿಂಗ್ ನಡೆಯುತ್ತಿದ್ದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಯುವ ನಟಿ ಪ್ರಾಚಿ ಸಿಂಗ್ ಹೆಸರು ಕಿರುತೆರೆ ಹಾಗೂ ಸಿನಿಮಾ ರಂಗದಲ್ಲಿ ಸಾಕಷ್ಟು ಕೇಳಿ ಬರುತ್ತಿದೆ. ಪ್ರಾಚಿ ಸಿಂಗ್ ಸದ್ಯ ಕಲರ್ಸ್ ವಾಹಿನಿಯ ಉಡಾನ್ ಎಂಬ ಸೀರಿಸ್ ನಲ್ಲಿ ನಟಿಸುತ್ತಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 4 ಟೆಸ್ಟ್ ಪಂದ್ಯಗಳನ್ನು ಆಡಿರುವ ಪೃಥ್ವಿ ಶಾ, 3 ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.
https://www.youtube.com/watch?v=pBfvuudmGeM








