ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ( NEET) ಭಯದಿಂದ 19 ವರ್ಷದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿದ ತಮಿಳುನಾಡಿನ ಮದುರೆಯಲ್ಲಿ ನಡೆದಿದೆ. ಇನ್ನೂ ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದ್ದು, ಪತ್ರದಲ್ಲಿ ಯುವತಿ ‘ನನಗೆ ಭಯವಾಗುತ್ತಿದೆ , ತನ್ನ ತಂದೆ ತಾಯಿ ನನ್ನ ಮೇಲೆ ಬಹಳ ಭರವಸೆ ಇಟ್ಟುಕೊಂಡಿದ್ದಾರೆ ಎಂದು ಯುವತಿ ಬರೆದುಕೊಂಡಿದ್ದಾಳೆ.
ಇನ್ನೂ ಈ ವಿಚಾರವಾಗಿ ಕಳವಳ ವ್ಯಕ್ತಪಡಿಸಿರುವ ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್, ‘ವಿದ್ಯಾರ್ಥಿಗಳು ಎಂತಹ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು. ಪೋಷಕರು ಅವರಿಗೆ ಮಾರ್ಗದರ್ಶನ ನೀಡಬೇಕು’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ‘ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. 2017ರಲ್ಲಿ ನೀಟ್ ಆಕಾಂಕ್ಷಿ ಅನಿತಾ, ಈಗ ಜ್ಯೋತಿಶ್ರೀ ದುರ್ಗಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಮೇಲೆ ನೀಟ್ ತೀವ್ರ ಪರಿಣಾಮ ಬೀರುತ್ತಿದೆ. ನೀಟ್ ನಿಷೇಧಿಸಿ, ತಮಿಳುನಾಡಿನ ವಿದ್ಯಾರ್ಥಿಗಳನ್ನು ಉಳಿಸಿ‘ ಎಂಸು ಟ್ವಿಟರ್ ಮೂಲಕ ಕರೆಕೊಟ್ಟಿದ್ದಾರೆ.
https://youtu.be/d0E5xnURqcg








