ಹಾಸನ : ಜಿಲ್ಲೆಯ ಅರಸೀಕೆರೆ ತಾಲೂಕಿನ ಬಂದೂರು ಬೋವಿ ಕಾಲೋನಿಯಲ್ಲಿ ಕಲುಷಿತ ನೀರು ಸೇವಿಸಿ 35ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂದೂರಿನಲ್ಲಿ ನೀರಿನ ಸಮಸ್ಯೆ ಇದ್ದು, ಅನಿವಾರ್ಯವಾಗಿ ಜನ ಬೋರ್ ವೆಲ್ ನೀರನ್ನೇ ಕುಡಿಯುತ್ತಿದ್ದರು. ಇಂದು ಸಹ ಬೋರ್ ವೆಲ್‍ನಲ್ಲಿ ಬರುತ್ತಿದ್ದ ಕಲುಷಿತ ನೀರನ್ನು ಸೇವಿಸಿ ಮಕ್ಕಳು, ವೃದ್ಧರು ಸೇರಿ ಸುಮಾರು 35 ಜನರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.
ಕೂಡಲೇ ಎಲ್ಲರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿದ ನಂತರ ಸ್ಥಳಕ್ಕೆ ಬಂದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ವಿಚಾರವಾಗಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿ ಈ ಹಿಂದೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದ್ರೆ ಯಾವೊಬ್ಬ ಅಧಿಕಾರಿಯೂ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇದರಿಂದ ಬಂದೂರು ಬೋವಿ ಕಾಲೋನಿ ನಿವಾಸಿಗಳು ಅನಿವಾರ್ಯವಾಗಿ ಬೋರ್ ವೆಲ್ ನಿಂದ ಬರುತ್ತಿದ್ದ ಕಲುಷಿತ ನೀರನ್ನೇ ಸೇವಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
https://youtu.be/eUEuO-_AiJA








