ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಇಂದು ಎರಡನೇ ದಿನವೂ ಮಳೆ ಅಬ್ಬರ ಮುಂದುವರೆದಿದೆ. ಇಂದು ಮುಂಜಾನೆ ಕೊಂಚ ಬಿಡುವು ನೀಡಿದ್ದ ಮಳೆರಾಯ, ಮಧ್ಯಾಹ್ನ ನಂತರ ಮತ್ತೆ ಚುರುಕು ಪಡೆದಿದ್ದಾನೆ. ಹೀಗಾಗಿ ಜಿಲ್ಲೆಯಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಂಗಳೂರು ಸೇರಿದಂತೆ ನಗರ ಪ್ರದೇಶಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ನಗರ ಹಲವೆಡೆ ಭಾರೀ ಮಳೆ ಆಗುತ್ತಿರುವ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ನಿನ್ನೆಯಷ್ಟೇ 50 ಮನೆಗಳಿಗೆ ಮಳೆ ನೀರು ನುಗ್ಗಿತ್ತು. ಇಂದೂ ಮಂಗಳೂರು ನಗರದ ಜೆಪ್ಪು ಮೊಗರುವಿನಲ್ಲಿ ಪ್ರಹಾಹ ಭೀತಿ ಎದುರಾಗಿದೆ. ನಾಳೆಯೂ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.









