ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಬಿಟ್ಟುಬಿಡದೆ ಜಿಟಿಜಿಟಿ ಮಳೆ ಸುರಿಯುತ್ತಿದ್ದು ಜನರನ್ನು ಮತ್ತೆ ಆತಂಕಕ್ಕೆ ದೂಡಿದೆ.
ಭಾಗಮಂಡಲ ಮತ್ತು ತಲಕಾವೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ, ಮಡಿಕೇರಿ, ನಾಪೆÇೀಕ್ಲು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.
ಬೆಳಿಗ್ಗೆ ಕೊಂಚ ಬಿಡುವು ನೀಡಿದ್ದ ವರುಣ ಮಧ್ಯಾಹ್ನದ ಬಳಿಕ ಬಿಟ್ಟುಬಿಡದೆ ಎಡಬಿಡದೆ ಸುರಿಯುತ್ತಲೇ ಇದೆ. ಮಳೆ ಜೊತೆಗೆ ಭಾರೀ ಪ್ರಮಾಣದಲ್ಲಿ ಚಳಿಗಾಳಿ ಬೀಸುತ್ತಿದ್ದು ಜನರು ತತ್ತರಿಸಿದ್ದಾರೆ. ತಲಕಾವೇರಿ, ಭಾಗಮಂಡಲ ಸುತ್ತಮುತ್ತಲಿನ ಬೆಟ್ಟ ಪ್ರದೇಶದಲ್ಲೆಲ್ಲಾ ಭಾರೀ ಮಳೆ ಸುರಿಯುತ್ತಿದ್ದು ಕಾವೇರಿ ನದಿಯ ನೀರಿನ ಮಟ್ಟದಲ್ಲಿ ಜಾಸ್ತಿಯಾಗಿದೆ.
ಭಾಗಮಂಡಲ ತ್ರಿವೇಣಿ ಸಂಗ್ರಮದಲ್ಲೂ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದು ವೇಳೆ ಮಳೆ ತೀವ್ರಗೊಂಡಲ್ಲಿ ಜಿಲ್ಲೆಯಲ್ಲಿ ಮತ್ತೆ ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿಯೇ ಮೂರು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕಾವೇರಿ ನದಿ ಪಾತ್ರದ ಜನರು ಮತ್ತು ಬೆಟ್ಟ ಪ್ರದೇಶದ ಜನರು ಆತಂಕ ಎದುರಿಸುವಂತೆ ಆಗಿದೆ.