ನವದೆಹಲಿ : ಭಾರತದಲ್ಲಿ ಕೊರೊನಾ ಆರ್ಭಟ ತಗ್ಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ದೇಶದಲ್ಲಿ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದ್ದು, ಇದೀಗ ಒಟ್ಟಾರೆ ಸೋಂಕಿತರ ಸಂಖ್ಯೆ 47,54,357ಕ್ಕೆ ಬಂದು ನಿಂತಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲಿ ದೇಶದಾದ್ಯಂತ 94,372 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 1,114 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 47,54,357 ಕ್ಕೆ ಕೊರೊನಾಗೆ ಬಲಿಯಾದವರ ಸಂಖ್ಯೆ 78,586 ಕ್ಕೆ ಏರಿಕೆಯಾಗಿದೆ.
ಇನ್ನು ಒಟ್ಟು 47,54,357 ಸೋಂಕಿತರ ಪೈಕಿ 36,24,197 ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, 9,73,175 ಮಂದಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
https://www.youtube.com/watch?v=TpNkhtiYjNs








