ಚಿತ್ರದುರ್ಗ : ಸರ್ಕಾರ ಅತಿವೃಷ್ಠಿ ಪರಿಸ್ಥಿತಿ ಮುಚ್ಚಿ ಹಾಕಲು, ಕೋವಿಡ್ ವೈಫಲ್ಯ ಮರೆಮಾಚಲು ಡ್ರಗ್ಸ್ ತನಿಖೆ ವರದಿ ಸೋರಿಕೆ ಮಾಡುತ್ತಿದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಗೋವಿಂದ ಕಾರಜೋಳ ಚಿತ್ರದುರ್ಗದಲ್ಲಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ ತನಿಖಾ ಹಾದಿ ತಪ್ಪಿಸುವ ಉದ್ದೇಶದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಇದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು. ಸರ್ಕಾರ ಕೋವಿಡ್ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿದ ಕಾರಣಕ್ಕೆ ವೈರಸ್ ನಿಯಂತ್ರಣದಲ್ಲಿದೆ. ಈ ಬಗ್ಗೆ ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಸಿದ್ದರಾಮಯ್ಯಗೆ ಗೋವಿಂದ ಕಾರಜೋಳ ಟಾಂಗ್ ನೀಡಿದ್ದಾರೆ.
ಕಳೆದ ವರ್ಷದ ಅತಿವೃಷ್ಠಿಯಿಂದ 35 ಸಾವಿರ ಕೋಟಿಯಷ್ಟು ಹಾನಿಯಾಗಿದೆ. ಸಂಪುಟ ವಿಸ್ತರಣೆಗೂ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿ ನೊಂದವರಿಗೆ ಸಾಂತ್ವನ ಹೇಳಿದ್ದಾರೆ. ಬೆಳೆ ಹಾನಿಯಾದ ರೈತರಿಗೆ 10 ಸಾವಿರ ರೂ. ಹಾಗೂ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಿದ್ದಾರೆ. ಈ ಕೆಲಸಗಳು ಸಿದ್ದರಾಮಯ್ಯ ಕಣ್ಣಿಗೆ ಕಾಣುವುದಿಲ್ಲವೇ ಎಂದು ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.
https://www.youtube.com/watch?v=pDPQuy6Xvhk








