ADVERTISEMENT
Friday, September 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟಾಪ್​ 12 ನ್ಯೂಸ್@12 PM

admin by admin
September 14, 2020
in Newsbeat, Saaksha Special, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೇಂದ್ರದ ವಿರುದ್ಧ ವಿಪಕ್ಷಗಳು ಗರಂ

ಮಹಾಮಾರಿ ಕೊರೋನಾ ವೈರಸ್ ಅಬ್ಬರದ ನಡುವೆಯೇ ಸಂಸತ್ತಿನಲ್ಲಿ ಉಭಯ ಸದನಗಳ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ, ಶೂನ್ಯ ಅವಧಿ ರದ್ದು ನಿರ್ಣಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕರು ತೀವ್ರವಾಗಿ ಕಿಡಿಕಾರುತ್ತಿದ್ದಾರೆ.

Related posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

September 25, 2026
ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

September 25, 2026

ಮಾನ್ಸೂನ್ ಅಧಿವೇಶನ ಆರಂಭ

ಲೋಕಸಭೆಯ ಮಾನ್ಸೂನ್ ಅಧಿವೇಶನ ಬೆಳಗ್ಗೆ 9 ಗಂಟೆಗೆ ಪ್ರಾರಂಭವಾಗಿದೆ. ಕಲಾಪ ಆರಂಭವಾಗುತ್ತಿದ್ದಂತೆ ಸ್ಪೀಕರ್ ಓಂ ಬಿರ್ಲಾ ಅವರು ಇತ್ತೀಚೆಗೆ ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಎಲ್ಲಾ ಸದಸ್ಯರೂ ಅಗಲಿದ ಗಣ್ಯರಿಗೆ ಮೌನ ಪ್ರಾರ್ಥನೆ ನಡೆಸಿ ಗೌರವ ಸಲ್ಲಿಸಿದ ನಂತರ ಕಲಾಪವನ್ನು ಒಂದು ಗಂಟೆ ಅವಧಿಗೆ ಸ್ಪೀಕರ್ ಮುಂದೂಡಿದರು.

92,071 ಮಂದಿಗೆ ಸೋಂಕು

ದೇಶದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ಒಂದೇ ದಿನ ಬರೋಬ್ಬರಿ 92,071 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ತಲುಪಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 1,136 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖಅಯೆ ಕೂಡ 79,772ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಗಡಿಯಲ್ಲಿ ಉದ್ವಿಗ್ನ

ವಿದೇಶಾಂಗ ಸಚಿವ ಜೈಶಂಕರ್, ಚೀನಾದ ವಿದೇಶಾಂಗ ಸಚಿವರೊಡನೆ ಮಾಸ್ಕೋದಲ್ಲಿ ನಡೆಸಿದ ಸಂವಾದದ ನಂತರವೂ ಭಾರತ-ಚೀನಾ ಗಡಿಯಲ್ಲಿನ ಉದ್ವಿಗ್ನತೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಲಡಾಖ್‍ನ ರೆಜಾಗ್ ಲಾ ಬಳಿಯ ಮುಖ್ಪಾರಿ ಶಿಖರದಲ್ಲಿ ಶೂಟಿಂಗ್ ವ್ಯಾಪ್ತಿಯ ಅಂತರದಲ್ಲಿ ಭಾರತ-ಚೀನಾ ಪಡೆಗಳು ಪರಸ್ಪರ ಕಾವಲು ಕಾಯುವುದನ್ನು ಮುಂದುವರಿಸಿದೆ.

ಪ್ರಧಾನಿ ನವಿಲುಗಳ ಜೊತೆ ಬ್ಯುಸಿ

ಪ್ರಧಾನಿಯವರು ನವಿಲುಗಳ ಜೊತೆ ಬ್ಯುಸಿಯಾಗಿದ್ದಾರೆ, ಹೀಗಾಗಿ ದೇಶದ ಜನರು ನಿಮ್ಮ ಜೀವನವನ್ನು ನೀವೇ ನೋಡಿಕೊಳ್ಳಬೇಕು, ನಿಮ್ಮ ಜಾಗ್ರತೆಯಲ್ಲಿ ನೀವಿರಿ ಎಂದು ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿಯವರ ಕಾಲೆಳೆದಿದ್ದಾರೆ.

ನೆಮ್ಮದಿ ಕಿತ್ತುಕೊಂಡ ಮಳೆ

ಕಳೆದ ಮೂರು ವರ್ಷಗಳಿಂದಲೂ ಕೊಡಗಿನಲ್ಲಿ ಸಂಭವಿಸುತ್ತಿರುವ ಭೀಕರ ಪ್ರವಾಹ ಮತ್ತು ಭೂಕುಸಿತ ಜಿಲ್ಲೆಯ ಜನರ ನೆಮ್ಮದಿಯನ್ನೇ ಕಿತ್ತುಕೊಂಡಿದೆ. ಕಳೆದ ಮೂರು ದಿನಗಳಿಂದ ತಲಕಾವೇರಿ, ಬ್ರಹ್ಮಗಿರಿಬೆಟ್ಟ, ಬಾಗಮಂಡಲ, ನಾಪೋಕ್ಲು ಸೇರಿದಂತೆ ಕಾವೇರಿ ನದಿಪಾತ್ರದ ಪ್ರದೇಶದಲ್ಲಿ ಧಾರಕಾರವಾಗಿ ಸುರಿಯುತ್ತಿದೆ. ಹೀಗೆ ಮಳೆ ಮುಂದುವರೆದಲ್ಲಿ ತ್ರಿವೇಣಿ ಸಂಗ್ರಮ ಮುಳುಗಡೆಯಾಗುವ ಸಾಧ್ಯತೆ ಇದ್ದು, ಜನರಲ್ಲಿ ಪ್ರವಾಹ ಆತಂಕ ಮನೆ ಮಾಡಿದೆ.

ಸೇವೆ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್

ಪ್ರಸಿದ್ದ ನಾಗಾರಾಧನೆಯ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇವಾಲಯದಲ್ಲಿ, ಕೊರೋನವೈರಸ್ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಸೇವೆಗಳನ್ನು ಮತ್ತೆ ಪುನರಾರಂಭಗೊಳಿಸಲು ಮುಜರಾಯಿ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಇಂದಿನಿಂದ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ಆರಂಭವಾಗಲಿದೆ.

ಕಂಗನಾಗೆ ನೋಟಿಸ್
ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಕಚೇರಿಯ ಅಕ್ರಮ ನಿರ್ಮಾಣ ಭಾಗವನ್ನು ತೆರವುಗೊಳಿಸಿದ ಕೆಲವೇ ದಿನಗಳಲ್ಲಿ ಬೃಹತ್ ಮುಂಬೈ ಪಾಲಿಕೆ ಮತ್ತೊಂದು ನೊಟೀಸ್ ಜಾರಿಗೊಳಿಸಿದೆ. ಈ ಬಾರಿ ನಟಿಯ ಮನೆಯ ಕೆಲವು ಭಾಗಗಳು ಅಕ್ರಮವಾಗಿ ನಿರ್ಮಾಣಗೊಂಡಿವೆ ಎಂಬ ಕಾರಣ ನೀಡಿ ಬಿಎಂಸಿ ನೊಟೀಸ್ ಜಾರಿಗೊಳಿಸಿದೆ.

ಉಲ್ಟಾ ಹೊಡೆದ ಐಂದ್ರಿತಾ
ಡ್ರಗ್ ಪೆಡ್ಲರ್ ಹಾಗೂ ಕ್ಯಾಸಿನೋ ಒಡೆಯ ಶೇಖ್ ಪಾಸಿಲ್ ಕೊಲೊಂಬೋ ಪಾರ್ಟಿಗೆ ಗುಳಿಕೆನ್ನೆ ಬೆಡಗಿ ಐಂದ್ರಿತಾ ಹೋಗಿದ್ದ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ. ವೈರಲ್ ಆದ ಫೋಟೋ ಹಾಗೂ ವಿಡಿಯೋ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ನಟಿ ಐಂದ್ರಿತಾ ರೇ ಉಲ್ಟಾ ಹೊಡೆದಿದ್ದಾರೆ.

ಥೀಮ್‍ಗೆ ಗ್ರ್ಯಾಂಡ್ ಸ್ಲ್ಯಾಮ್ ಕಿರೀಟ..!

ಆಸ್ಟ್ರೀಯದ ಡಾಮಿನಿಕ್ ಥೀಮ್ ಅವರು ಚೊಚ್ಚಲ ಗ್ರ್ಯಾಂಡ್ ಸ್ಲ್ಯಾಂ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. 2020ರ ಯುಎಸ್ ಓಪನ್ ಟೆನಿಸ್ ಟೂರ್ನಿಯ ಫೈನಲ್ ನಲ್ಲಿ ಡಾಮಿನಿಕ್ ಥೀಮ್ ಅವರು ಜರ್ಮನಿಯ ಅಲೆಕ್ಸಾಂಡರ್ ಝಿವೆರೆವ್ ವಿರುದ್ಧ ಪ್ರಯಾಸದ ಜಯ ಸಾಧಿಸಿದ್ರು. ಮೊದಲ ಎರಡು ಸೆಟ್ ಗಳನ್ನು ಸೋತಿದ್ದ ಡಾಮಿನಿಕ್ ಥೀಮ್ ನಂತರದ ಎರಡು ಸೆಟ್ ಗಳನ್ನು ಸುಲಭವಾಗಿ ಗೆದ್ದುಕೊಂಡ್ರು. ಆದ್ರೆ ಅಂತಿಮ ಸೆಟ್ ನಲ್ಲಿ ಅಲೆಕ್ಸಾಂಡರ್ ಅವರು ದಿಟ್ಟ ಹೋರಾಟವನ್ನು ನೀಡಿದ್ರು. ಆದ್ರೂ ಡಾಮಿನಿಕ್ ಅವರ ಅದ್ಭುತ ಆಟದಿಂದ ಅಲೆಕ್ಸಾಂಡರ್ ಅವರು ತಲೆಬಾಗಲೇಬೇಕಾಯ್ತು.

ಇಂಗ್ಲೆಂಡ್ ಗೆ ಜಯ

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 24 ರನ್ ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿ 1-1ರಿಂದ ಸಮಬಲಗೊಂಡಿದೆ. ಮ್ಯಾಂಚೆಸ್ಟರ್ ನಲ್ಲಿ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ 231 ರನ್ ಗಳ ಸವಾಲಿಗೆ ಪ್ರತ್ಯುತ್ತರ ನೀಡಿದ ಆಸ್ಟ್ರೇಲಿಯಾ 207 ರನ್ ಗಳಿಗೆ ಸರ್ವಪತನಗೊಂಡು 24 ರನ್ ಗಳಿಂದ ಸೋಲು ಅನುಭವಿಸಿತ್ತು.

ರಾಯಲ್ಸ್ ಗೆ ವಾರ್ನ್ ಮೆಂಟರ್

ಆಸ್ಟ್ರೇಲಿಯಾದ ಮಾಜಿ ಸ್ಪಿನ್ ಮಾಂತ್ರಿಕ ಹಾಗೂ ರಾಜಸ್ತಾನ ರಾಯಲ್ಸ್ ತಂಡದ ಮಾಜಿ ಕೋಚ್ ಕಮ್ ನಾಯಕ ಶೇನ್ ವಾರ್ನ್ ಅವರು ಮತ್ತೆ ರಾಜಸ್ತಾನ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಶೇನ್ ವಾರ್ನ್ ಅವರು ರಾಯಲ್ಸ್ ತಂಡದ ಮೆಂಟರ್ ಆಗಿ ಆಯ್ಕೆಯಾಗಿದ್ದಾರೆ. 2008ರ ಮೊದಲ ಐಪಿಎಲ್ ನಲ್ಲಿ ಶೇನ್ ವಾರ್ನ್ ಅವರು ರಾಜಸ್ತಾನ ರಾಯಲ್ಸ್ ತಂಡದ ನಾಯಕ ಹಾಗೂ ಕೋಚ್ ಆಗಿ ಚೊಚ್ಚಲ ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

https://youtu.be/hCJbcF6MKbg

Tags: BJPChinaCongresscoronavirusDrugkanganarahulRain
ShareTweetSendShare
Join us on:

Related Posts

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

ಅಟ್ಟಿಕಾ ಗೋಲ್ಡ್ ಸಾಮ್ರಾಜ್ಯಕ್ಕೆ ಇಡಿ ಶಾಕ್: 4 ರಾಜ್ಯಗಳ 19 ಕಡೆ ಮಹಾ ದಾಳಿ, ಮಾಲೀಕ ಬಾಬು ಪರಾರಿ

by Shwetha
September 25, 2026
0

ಹಳೆಯ ಚಿನ್ನ ಖರೀದಿ ಮತ್ತು ಅಡವಿಟ್ಟ ಚಿನ್ನ ಬಿಡಿಸಿಕೊಡುವ ಹೆಸರಿನಲ್ಲಿ ಜನಪ್ರಿಯವಾಗಿದ್ದ ಅಟ್ಟಿಕಾ ಗೋಲ್ಡ್ ಕಂಪನಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಅಕ್ರಮ ಹಣ...

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

ಚುನಾವಣಾ ಆಯೋಗ ಸರ್ಕಾರದ ಕೈಗೊಂಬೆಯಾಗಬಾರದು: ಜ್ಞಾನೇಶ್ ಕುಮಾರ್ ವಜಾಕ್ಕೆ ಸಿದ್ದರಾಮಯ್ಯ ಪಟ್ಟು.

by Shwetha
September 25, 2026
0

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆ ಮತ್ತು ಕಾರ್ಯವೈಖರಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

ಉಳ್ಳವರಿಗೆ ಗ್ಯಾರಂಟಿ ರದ್ದು ಮಾಡಬೇಕಾ, ಬಡವರಿಗೆ ಮಾತ್ರ ಭಾಗ್ಯ ಸೀಮಿತವಾಗಲಿ: ಬಿಜೆಪಿ ಶಾಸಕರ ಪ್ರಸ್ತಾವನೆಗೆ ಡಿಕೆಶಿ ಖಡಕ್ ಕೌಂಟರ್

by Shwetha
September 25, 2026
0

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಭವಿಷ್ಯದ ಬಗ್ಗೆ ಈಗ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ಆರಂಭವಾಗಿದೆ. ಬರಗಾಲದ ನೆಪವೊಡ್ಡಿ ಗ್ಯಾರಂಟಿ ಯೋಜನೆಗಳನ್ನು ಕೇವಲ ಬಡವರಿಗಷ್ಟೇ ಅಂದರೆ ಬಿಪಿಎಲ್...

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

ನೀಲಿ ಶಾಲು ಸಮಾನತೆಯ ಸಂಕೇತ ನಾನು ದಲಿತ ವಿರೋಧಿಯಲ್ಲ: ದಲಿತ ವಿರೋಧಿ ಎಂಬ ಟೀಕೆಗೆ ಪ್ರತಾಪ್ ಸಿಂಹ ಖಡಕ್ ಕೌಂಟರ್

by Shwetha
September 25, 2026
0

ಟಿ ನರಸೀಪುರ ಘಟನೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಎರಡು ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ವಿರುದ್ಧ ವಾಗ್ದಾಳಿ...

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

5 ಗಂಟೆಗಳ ಕಾಲ ಅಸಹನೀಯ ಕಿರಿಕಿರಿ,ನಾಗರಿಕ ಪ್ರಜ್ಞೆ ಎಲ್ಲಿಗೆ ಹೋಯಿತು:ದೇವರೇ ಈ ದೇಶವನ್ನು ಕಾಪಾಡಬೇಕು – ರೈಲಿನಲ್ಲಿ ಪ್ರಯಾಣಿಕರ ಅಸಭ್ಯ ವರ್ತನೆಗೆ ಅಸಹಾಯಕತೆ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ

by Shwetha
September 25, 2026
0

ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವಾಗ ನಮಗೆ ಕನಿಷ್ಠ ನಾಗರಿಕ ಪ್ರಜ್ಞೆ ಇರಬೇಕಲ್ಲವೇ? ಇತರರ ವೈಯಕ್ತಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವುದು ಎಷ್ಟು ಸರಿ? ಇಂತಹ ಹತ್ತಾರು ಪ್ರಶ್ನೆಗಳನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram