ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ : ಹೆಚ್ ಡಿಕೆ ಎಚ್ಚರಿಕೆ

admin by admin
September 14, 2020
in Newsbeat, Politics, ರಾಜಕೀಯ
G.T.Deve Gowda
Share on FacebookShare on TwitterShare on WhatsappShare on Telegram

ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ : ಹಿಂದಿ ಹೇರಿಕೆಗೆ ಹೆಚ್ ಡಿಕೆ ಕಿಡಿ

ಬೆಂಗಳೂರು : ವಿವಿಧ ಭಾಷೆ, ವಿಭಿನ್ನ ಸಂಸ್ಕøತಿ, ಪರಂಪರೆಗಳನ್ನು ಒಡಲಲ್ಲಿಟ್ಟುಕೊಂಡ ಭಾರತದಲ್ಲಿ, ಕನ್ನಡಿಗರೂ ಸೇರಿದಂತೆ ಅನ್ಯ ಭಾಷಿಕರ ಮೇಲೆ ಹಿಂದಿಯನ್ನು ಬಲವಂತವಾಗಿ ಹಲವು ಮಾರ್ಗಗಳ ಮೂಲಕ ಹೇರಲಾಗುತ್ತಿದೆ. ಇಂದಿನ ಹಿಂದಿ ದಿವಸ್ ಕೂಡ ಅಂಥದ್ದೇ ಅಪಮಾರ್ಗ. ಭಾಷಾ ಅಹಂಕಾರದ ಸಂಕೇತವಾದ ಹಿಂದಿ ದಿವಸಕ್ಕೆ ಸ್ವಾಭಿಮಾನಿ ಕನ್ನಡಿಗರ ಪ್ರಬಲ ವಿರೋಧವಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Related posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

July 1, 2026
ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

July 1, 2026

ಹಿಂದೆ ದಿವಸ್ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿಕೆ, ಹಿಂದಿ ರಾಷ್ಟ್ರಭಾಷೆಯಲ್ಲ. ರಾಷ್ಟ್ರಭಾಷೆ ಎಂಬ ಕಲ್ಪನೆ ಸಂವಿಧಾನದಲ್ಲಿಲ್ಲ. ಆದರೂ ಹಿಂದಿಯನ್ನು ರಾಷ್ಟ್ರಭಾಷೆ ಎಂದು ಬಿಂಬಿಸುವ, ಅದರಲ್ಲಿ ರಾಜಕೀಯ ಮಾಡುವ ಪ್ರಯತ್ನ ಹಿಂದಿನಿಂದಲೂ ನಡೆದೇ ಬಂದಿದೆ. ಅದು ಈಗ ವಿಪರೀತಕ್ಕೆ ಹೋಗಿದೆ. ದೇಶದ ಇತರೇ ಭಾಷಿಕರು ಇಂಥ ಪ್ರಯತ್ನಗಳ ವಿರುದ್ಧ ದಂಗೆ ಏಳುವುದಕ್ಕೂ ಮೊದಲು ಹಿಂದಿ ಹೇರಿಕೆ ನಿಲ್ಲಬೇಕು ಎಂದು ಒತ್ತಾಯಿಸಿದ್ದಾರೆ.

ಹಿಂದಿ ಹೇರಿಕೆಗೆ ಕಲಿಕೆ ನೆಪ ನೀಡಲಾಗುತ್ತಿದೆ. ಕಲಿಕೆ ಎಂದಿಗೂ ಆಯ್ಕೆಯೇ ಹೊರತು ಹೇರಿಕೆಯಿಂದ ಕಲಿಕೆಯಾಗಲು ಸಾಧ್ಯವಿಲ್ಲ. ಭಾಷೆಯೊಂದರ ಹೇರಿಕೆಯು ಇನ್ನೊಂದು ಭಾಷೆಯ ಅಸ್ಮಿತೆಯನ್ನು ಪ್ರಶ್ನಿಸುವಂತಿರಬಾರದು. ಭಾಷೆಯ ಹೇರಿಕೆಯು ಮತ್ತೊಂದು ಭಾಷೆಯ ಅವಸಾನಕ್ಕೆ ದಾರಿಯಾಗಬಾರದು. ದೇಶದ ಸಂಸ್ಕೃತಿ, ವೈವಿದ್ಯತೆ, ಸಮಗ್ರತೆಗೆ ಧಕ್ಕೆ ತರಬಾರದು.

ಕೇಂದ್ರದ ಆಡಳಿತದಲ್ಲಿ ಹಿಂದಿ ಜಾರಿಗೆ ಬಂದಿದ್ದಕ್ಕಾಗಿ, ಹಿಂದಿ ಜಾರಿ ಹೋರಾಟ ಮಾಡಿದ ಬೋಹರ್ ರಾಜೇಂದ್ರ ಸಿಂಹ ಜನ್ಮದಿನದ ನೆನಪಿಗಾಗಿ ಸೆ. 14ರಂದು ಹಿಂದಿ ದಿವಸ ಆಚರಿಸಲಾಗುತ್ತಿದೆ. ರಾಜೇಂದ್ರ ಸಿಂಹ ಹುಟ್ಟುಹಬ್ಬದಲ್ಲಿ, ಹಿಂದಿ ಆಡಳಿತ ಭಾಷೆ ಆಗಿದ್ದರಲ್ಲಿ ಹಿಂದಿಯೇತರರು ಸಂಭ್ರಮಿಸುವುದು ಏನಿದೆ? ನಿರ್ಥಕ ಹಿಂದಿ ದಿವಸ ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಗೊಂದಲಕಾರಿ ಅಂಶಗಳಿವೆ. ಇದೇ ಗುರಾಣಿ ಹಿಡಿದು ಹಿಂದಿ ಹೇರಿಕೆ ಪ್ರಯತ್ನಗಳು ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸಲೇ ಬಂದಿರುವ ಬಿಜೆಪಿಗರು, ಒಂದೊಳ್ಳೆ ಕಾರಣಕ್ಕಾಗಿ ಇದನ್ನು ಬದಲಿಸಲಿ. ಈ ಮೂಲಕ ಕನ್ನಡವೂ ಸೇರಿ ಅನ್ಯ ಭಾಷೆಗಳ ಅಸ್ಮಿತೆಯನ್ನು ರಕ್ಷಿಸಲಿ.

ಹಿಂದಿ ದಿವಸದಂತೇ, ತ್ರಿಭಾಷಾ ಸೂತ್ರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯೂ ಹಿಂದಿ ಹೇರಿಕೆಯ ಮಾರ್ಗವೇ. ದ್ವಿಭಾಷಾ ಸೂತ್ರವೇ ಇದ್ದರೆ ನಷ್ಟವೇನು? ಹಿಂದಿ ಮಾತನಾಡುವ ಯಾವ ರಾಜ್ಯದಲ್ಲಿ ತ್ರಿಭಾಷಾ ಸೂತ್ರ ಜಾರಿಯಲ್ಲಿದೆ? ಹಾಗಿದ್ದಮೇಲೆ ಹಿಂದಿಯೇತರ ರಾಜ್ಯಗಳಿಗೆ ಮಾತ್ರ ಏಕೆ ತ್ರಿಭಾಷಾ ಸೂತ್ರ? ಎನ್‍ಇಪಿಯನ್ನು ರಾಜ್ಯ ಸರ್ಕಾರ ಒಪ್ಪಬಾರದು.

ಇತ್ತೀಚೆಗೆ ಹಿಂದಿಯನ್ನು ಸಿದ್ಧಾಂತದ ವಿಚಾರವಾಗಿ ಪರಿವರ್ತಿಸಲಾಗಿದೆ. ರಾಷ್ಟ್ರೀಯತೆ, ದೇಶಭಕ್ತಿ, ಹಿಂದುತ್ವದೊಂದಿಗೆ ಹಿಂದಿಯನ್ನು ಸಮೀಕರಿಸಲಾಗಿದೆ. ಇಂಥ ಪ್ರಯತ್ನಗಳಿಗಿಂತಲೂ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ವಿವಿಧ ಭಾಷೆಗಳನ್ನು ಆಡುವ ಭಾರತೀಯರ ದೇಶಭಕ್ತಿಯನ್ನು ಭಾಷೆ ಮೂಲಕ ಅಳೆಯುವುದು ಅಪಚಾರವೇ ಸರಿ. ಇದು ಸಮಗ್ರತೆಗೆ ಎಸೆದ ಸವಾಲು.

ದಕ್ಷಿಣ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಹಿಂದಿಯನ್ನು ಸುಲಭವಾಗಿ ಹೇರಬಹುದು ಎಂದು ಹಿಂದಿ ಶ್ರೇಷ್ಠತೆ ವ್ಯಸನಿಗಳು ಅಂದಾಜಿಸಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ನಾಯಕರ ನಡತೆಯೂ ಕಾರಣವಿರಬಹುದು. ಕನ್ನಡಿಗರದ್ದು ಸೌಹಾರ್ದ ಗುಣ. ಅದನ್ನು ದೌರ್ಬಲ್ಯ ಎಂದೆಣಿಸುವುದು ಬೇಡ. ಕನ್ನಡಿಗರ ಐತಿಹಾಸಿಕವಾದ ಮತ್ತೊಂದು ಗುಣ ಸಿಡಿದರೆ ಎಲ್ಲರೂ ತರಗೆಲೆಗಳೇ.

ಕಾವೇರಿಯಿಂದ ಗೋದಾವರಿವರೆಗೆ ಆಳಿದ, ಇಂದಿನ ಕರ್ನಾಟಕಕ್ಕಿಂತಲೂ ಹಲವು ಪಟ್ಟು ರಾಜ್ಯ ವಿಸ್ತರಣೆ ಮಾಡಿದ್ದ ಕನ್ನಡಿಗರಲ್ಲಿ ಶೌರ್ಯ, ಸ್ವಾಭಿಮಾನ ರಕ್ತಗತ. ಹಿಂದಿಯನ್ನು ಬಲವಂತವಾಗಿ ಹೇರುವ ಪ್ರಯತ್ನಗಳ ವಿರುದ್ಧ ಕನ್ನಡಿಗರ ಈ ಚಾರಿತ್ರಿಕ ಗುಣ ಎದ್ದು ನಿಂತರೆ ಹಿಂದಿ ಹೇರಲು ಬರುವವರ ಕುತಂತ್ರಗಳು ಅಡಗಲಿದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

https://youtu.be/aqzcsTp3v5I

Tags: BJPH.D.KumaraswmayHindi DivasKannadigaskarnataka
ShareTweetSendShare
Join us on:

Related Posts

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

2028ಕ್ಕೆ ನಶೆ ಮುಕ್ತ ಕರ್ನಾಟಕ- ಮಾದಕ ಜಾಲದ ಮಾಹಿತಿ ನೀಡಿದರೆ ಸಿಗಲಿದೆ ಭರ್ಜರಿ ಬಹುಮಾನ: ಮಾದಕ ದಂಧೆಕೋರರ ವಿರುದ್ಧ ಡಿ ಕೆ ಶಿವಕುಮಾರ್ ಸಮರ

by Shwetha
July 1, 2026
0

ಮಾದಕ ವಸ್ತುಗಳ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಈಗ ಹೊಸ ಸಂಕಲ್ಪ ಮಾಡಿದೆ. 2028ರ ವೇಳೆಗೆ ಕರ್ನಾಟಕವನ್ನು ಸಂಪೂರ್ಣ ನಶೆ ಮುಕ್ತ ರಾಜ್ಯವನ್ನಾಗಿ ಮಾಡುವ ದೃಢ...

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಮನೆಯಿಂದಲೇ SIR ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಡಿಕೆ ಶಿವಕುಮಾರ್

by Shwetha
July 1, 2026
0

ರಾಜ್ಯಾದ್ಯಂತ ಇಂದು SIR ಅಭಿಯಾನ ಆರಂಭವಾಗಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನಿವಾಸದಿಂದಲೇ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಧಿಕಾರಿಗಳಿಂದ ಗಣತಿ ನಮೂನೆ...

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

ಚಪ್ಪಲಿ ಎಸೆದಿದ್ದಕ್ಕೆ ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಪ್ರದೀಪ್ ಈಶ್ವರ್ : ಕಣ್ಣೀರು ಹಾಕಿದ ಶಾಸಕನಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ

by Shwetha
July 1, 2026
0

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ನಡೆದ ಚಪ್ಪಲಿ ಎಸೆತ ಪ್ರಕರಣ ಈಗ ರಾಜಕೀಯವಾಗಿ ಭಾರೀ ಸಂಚಲನ ಮೂಡಿಸಿದೆ. ಈ ಹೀನಾಯ ಘಟನೆಯಿಂದ ಮನನೊಂದ ಪ್ರದೀಪ್...

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ನನ್ನ ಪಾತ್ರವಿಲ್ಲ ಎಂದ ಚಂಪತ್ ರೈ

by Shwetha
July 1, 2026
0

ಚಂಪತ್ ರೈ ಅವರು ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ಪೊಲೀಸರ ವಿಚಾರಣೆ ವೇಳೆ ಸ್ಪಷ್ಟಪಡಿಸಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಟಿನ್ನು ಯಾದವ್ ಹೀಗೆ...

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram