ಕೊರೋನಾ ಭೀತಿ ಹಿನ್ನೆಲೆಯಲ್ಲಿ ಹಳೆ ಮೈಸೂರು ಭಾಗದ ಸಿಬಿಎಸ್’ಸಿ ಶಾಲೆಗಳ ಎಲ್.ಕೆ.ಜಿ, ಯು.ಕೆ.ಜಿ, 1 ರಿಂದ 4ನೇ ತರಗತಿ ಮಕ್ಕಳಿಗೆ ಪರೀಕ್ಷೆ ರದ್ದುಗೊಳಿಸಿ ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ. 5 ರಿಂದ 9ನೇ ತರಗತಿಯ ವರೆಗಿನ ಮಕ್ಕಳಿಗೆ ಪ್ರಿಪರೇಟರಿ ಪರೀಕ್ಷೆಯನ್ನೇ ಅಂತಿಮ ಪರೀಕ್ಷೆಯನ್ನಾಗಿ ಪರಿಗಣಿಸುವ ನಿರ್ಧಾರ ಮಾಡಲಾಗಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳ ಖಾಸಗಿ ಸಿಬಿಎಸ್ಸಿ ಶಾಲೆಗಳ ಒಕ್ಕೂಟ ಈ ನಿರ್ಧಾರ ಕೈಗೊಂಡಿದ್ದು, 5 ಜಿಲ್ಲೆಗಳ 240 ಸಿಬಿಎಸ್ಸಿ ಶಾಲೆಗಳಿಂದ ಒಪ್ಪಿಗೆ ಸಿಕ್ಕಿದೆ.
ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 20ರ ಒಳಗೆ ಕಡ್ಡಾಯವಾಗಿ ರಜೆ ಘೋಷಣೆ ಮಾಡುವಂತೆ ಹಾಗೂ ಯಾವುದೇ ಬೇಸಿಗೆ ಶಿಬಿರಕ್ಕೆ ಮಕ್ಕಳನ್ನು ಸೇರಿಸದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಬಿಎಸ್ಸಿ ಖಾಸಗಿ ಶಾಲೆಗಳ ಒಕ್ಕೂಟ ಅಧ್ಯಕ್ಷ ಸುಧಾಕರ್ ಶೆಟ್ಟಿ ತಿಳಿಸಿದ್ದಾರೆ.
ಮಕ್ಕಳಿಲ್ಲದ ದಂಪತಿಗಳಿಗೆ ಗುಡ್ ನ್ಯೂಸ್: ಆಯುಷ್ಮಾನ್ ಪ್ಯಾಕೇಜ್ ನಿರಾಕರಿಸಿದ ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಸೆಡ್ಡು- ಬಡವರ ಮಡಿಲು ತುಂಬಲು ಸರ್ಕಾರಿ ಆಸ್ಪತ್ರೆಗಳಲ್ಲೇ ಹೈಟೆಕ್ ಐವಿಎಫ್ ಭಾಗ್ಯ!
ಮಂಗಳೂರು: ಸಂತಾನ ಭಾಗ್ಯವಿಲ್ಲದೆ ಮಾನಸಿಕವಾಗಿ ಕೊರಗುತ್ತಿರುವ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ದಂಪತಿಗಳ ಬಾಳಲ್ಲಿ ಆಶಾಕಿರಣ ಮೂಡಿಸುವ ಐತಿಹಾಸಿಕ ನಿರ್ಧಾರವೊಂದನ್ನು ರಾಜ್ಯ ಆರೋಗ್ಯ ಇಲಾಖೆ ಕೈಗೊಂಡಿದೆ....






