ಬೆಂಗಳೂರು : ಡ್ರಗ್ಸ್ ಮಾಫಿಯಾ ನಂಟಿನ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎನ್ನಲಾಗಿರುವ ದಾಖಲೆಗಳು ಲಭ್ಯವಾಗಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಬುರ್ಖಾ ಧರಿಸಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸಂಜನಾ ಅವರೇ ಅಪ್ಲೋಡ್ ಮಾಡಿದ್ದು, ಇಸ್ಲಾಂ ಧರ್ಮವನ್ನು ಹೊಗಳಿರುವುದು ಈಗ ಬೆಳಕಿಗೆ ಬಂದಿದೆ.
ಅಂದು ಬ್ಲಾಕ್ ಅಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, ಇಸ್ಲಾಂ ಸಂಸ್ಕøತಿ, ಸಂಪ್ರದಾಯದ ಬಗ್ಗೆ ಪ್ರಭಾವಿತಳಾಗಿದ್ದೇನೆ. ಅಲ್ಲದೆ ಧರ್ಮದ ಬಗ್ಗೆ ಆಕರ್ಷಿತಳಾಗಿದ್ದೇನೆ ಎಂದು ಬರೆದುಕೊಳ್ಳುವ ಮೂಲಕ ಮುಸ್ಲಿಂ ಧರ್ಮವನ್ನು ಹೊಗಳಿದ್ದರು. ಈ ಎಲ್ಲಾ ಬೆಳವಣಿಗೆಗಳನ್ನು ಗಮನಿಸಿದಾಗ ನಟಿ 2014ರಲ್ಲೇ ಮತಾಂತರಕ್ಕೆ ಮನಸ್ಸು ಮಾಡಿದ್ರಾ ಎಂಬ ಪ್ರಶ್ನೆ ಎದ್ದಿದೆ.
ಇನ್ನು ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿರುವ ದಾರುಲ್ ಉಲೂಮ್ ಶಾ ವಲಿವುಲ್ಲಾ ಮಸೀದಿಯಲ್ಲಿ 2018ರ ಅಕ್ಟೋಬರ್ 9ರಂದು ಸಂಜನಾ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುತ್ತಿದ್ದೇನೆ. ಇದಕ್ಕೆ ಯಾರ ಒತ್ತಡವೂ ಇಲ್ಲ ಎಂದು ಕೋಟ್ರ್ಗೆ ಅಫಿಡವಿಟ್ ಸಲ್ಲಿಸುವ ಮೂಲಕ ಇಸ್ಲಾಂ ಧರ್ಮಕ್ಕೆ ಸಂಜನಾ ಮತಾಂತರ ಆಗಿದ್ದಾರೆ.ಮತಾಂತರಗೊಂಡ ಬಳಿಕ ಸಂಜನಾ ತನ್ನ ಹೆಸರನ್ನ ಮಹಿರಾ ಎಂದು ಬದಲಾಯಿಸಿಕೊಂಡಿದ್ದಾರೆ.
ಚಿತ್ರರಂಗದಲ್ಲಿ ಇರುವ ಕಾರಣ ತಮ್ಮ ಮದುವೆ ಹಾಗೂ ಮತಾಂತರದ ಮಾಹಿತಿಯನ್ನು ಸಂಜನಾ ಮುಚ್ಚಿಟ್ಟಿದ್ದರು ಎನ್ನಲಾಗಿದೆ.