ಬೆಂಗಳೂರು: ಸುಧಾರಣಾ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ನಿನ್ನೆಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಆಹೋರಾತ್ರಿ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಇಂದೂ ಕೂಡ ಮುಂದುರೆದಿದೆ.
ನಿನ್ನೆಯಿಂದ ಫ್ರೀಡಂಪಾರ್ಕಿನಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದರು. ಸರ್ಕಾರದ ಯಾವ ಸಚಿವರಾಗಲಿ, ಅಧಿಕಾರಿಗಳಾಗಲಿ ತಮ್ಮ ಮನವಿ ಸ್ವೀಕರಿಸಲು ಬಂದಿಲ್ಲ. ಹೀಗಾಗಿ ಸರ್ಕಾರ ಕಾಯ್ದೆಗಳನ್ನು ವಾಪಸ್ ಪಡೆಯುವವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಸರ್ಕಾರ ಇಂದು ಮಧ್ಯಾಹ್ನ 12ಗಂಟೆಯೊಳಗೆ ಸರ್ಕಾರ ನಿರ್ಧಾರ ಪ್ರಕಟಿಸಬೇಕು ಎಂದು ಗಡುವು ನೀಡಿದ ರೈತ ಹೋರಾಟಗಾರರು, ಇಲ್ಲವಾದ್ರೆ ಶುಕ್ರವಾರ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ.
ಸೆ.25ಕ್ಕೆ ಪಂಜಾಬ್ ಹಾಗೂ ಹರಿಯಾಣದಲ್ಲಿ ರೈತ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಅಂದೇ ರಾಜ್ಯದಲ್ಲೂ ಬಂದ್ ನಡೆಸಲು ರೈತ ಸಂಘಟನೆಗಳು ಇಂದು ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.
ಪ್ರತಿಭಟನೆ ಮುಂದುವರೆದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಬಸ್‍ಗಳನ್ನು ತಡೆದು ಸಾಂಕೇತಿಕ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿವೆ.
ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಸಭೆ
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇರಾನ್–ಅಮೆರಿಕ ಹಾಗೂ ಇಸ್ರೇಲ್ ನಡುವಿನ ಯುದ್ಧದ...







